ನ.01 ರಂದು ರಿಪ್ಪನ್ ಪೇಟೆಯಲ್ಲಿ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ

ರಿಪ್ಪನ್ ಪೇಟೆಯಲ್ಲಿ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ
ರಿಪ್ಪನ್‌ಪೇಟೆ;- ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ದಿ.ಪುನೀತ್‌ರಾಜ್ ಆಭಿಮಾನಿ ಬಳಗದ ೩ ನೇ ವರ್ಷದ ವಾರ್ಷೀಕೋತ್ಸವ ಮತ್ತು ನವಂಬರ್ ೧ ರಂದು ಕನ್ನಡ ರಾಜ್ಯೋತ್ಸವವನ್ನು ಈ ಭಾರಿ ಆದ್ದೂರಿಯಾಗಿ ಆಚರಿಸುವ ಬಗ್ಗೆ ನಿರ್ಧರಿಸಲಾಗಿದ್ದು ಅದರನ್ವಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಇದರೊಂದಿಗೆ ದಿ.ಪುನೀತ್‌ರಾಜ್ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಸಿದ್ದಿವಿನಾಯಕ ವೃತ್ತದಲ್ಲಿ ಏರ್ಪಡಿಸಲಾಗಿದೆ ಎಂದು ಕಸ್ತೂರಿ ಕನ್ನಡ ಸಂಘದ ಆಧ್ಯಕ್ಷರಾದ ಉಲ್ಲಾಸ್ ತೆಂಕೋಲ್ ಮತ್ತು ಆರ್.ಎ.ಚಾಬುಸಾಬ್ ಹಾಗೂ ಮೆಣಸೆ ಆನಂದ್ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಆಕ್ಟೋಬರ್ ೩೧ ರಂದು ಮಂಗಳವಾರ ಬೆಳಗ್ಗೆ ೧೦ ಗಂಟೆಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾರ್ವಜನಿಕರಿಗೆ ಮತ್ತು ಶಾಲಾ ಮಕ್ಕಳಿಗಾಗಿ ಆಟೋಟ ಸ್ಫರ್ಧೆಗಳನ್ನು ಮತ್ತು ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ.ಆರತಿ ತಟ್ಟೆ ಅಲಂಕಾರ ಹಾಗೂ ಸಂಗೀತಾ ಕುರ್ಚಿ ನಂತರ ಮಧ್ಯಾಹ್ನ ೨ ಗಂಟೆಗೆ ಥ್ರೋಬಾಲ್ ಮತ್ತು ವಾಲಿಬಾಲ್ ಪಂದ್ಯಾವಳಿ ಪುರುಷರಿಗಾಗಿ ವಾಲಿಬಾಲ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದೆ.

ನವಂಬರ್ ೧ ರಂದು ಬುಧವಾರ ಬೆಳಗ್ಗೆ ೯ ಗಂಟೆಗೆ ವಿವಿಧ ಮಹಿಳಾ ಸಂಘದವರಿಂದ ಪೂರ್ಣ ಕುಂಭ ಸ್ವಾಗತದೊಂದಿಗೆ ಶಾಲಾ ಮಕ್ಕಳ ವಿವಿಧ ವೇಷ ಭೂಷಣದೊಂದಿಗೆ ಹೆಸರಾಂತ ಕಲಾ ತಂಡಗಳ ಕಲಾ ಮೆರಗಿನೊಂದಿಗೆ `ತಾಯಿ ಭುವನೇಶ್ವರಿಯ ಅಲಂಕೃತ ಭಾವಚಿತ್ರ ಮೆರವಣಿಗೆ’ ೧೦ ಗಂಟೆಗೆ ಕನ್ನಡ ದ್ವಜಾರೋಹಣ,೧೧ ಗಂಟೆಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಜರುಗಲಿದೆ.

ರಾಜ್ಯೋತ್ಸವದ ಆಂಗವಾಗಿ ಶಾಲಾ ಕಾಲೇಜ್ ವಿದ್ಯಾಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಸಂಜೆ ಸಮಾರೋಪ ಸಮಾರಂಭ ಅಯೋಜಿಸಲಾಗಿದ್ದು ಶಾಸಕ ಗೋಪಾಲಕೃಷ್ಣ ಬೇಳೂರು,ಸಂಸದ ಬಿ.ವೈ.ರಾಘವೇಂದ್ರ,ಶಾಸಕ ಆರಗ ಜ್ಞಾನೇಂದ್ರ ಮಾಜಿ ಶಾಸಕ ಹರತಾಳು ಹಾಲಪ್ಪ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.

ನಂತರ ರಾತ್ರಿ ೮ ಗಂಟೆಗೆ ಝೀ ಕನ್ನಡ ವಾಹಿನಿಯ ಸರಿಗಮಪ ಖ್ಯಾತಿಯ ಕು.ಸಾದ್ವಿನಿಕೊಪ್ಪ,ಪ್ರಖ್ಯಾತ ಗಾಯನ ಕಲಾವಿದರಾದ ಮೆಹಬೂಬ್‌ಸಾಬ್,ಆಶ್ವಿನ್‌ಶರ್ಮ,ಎದೆ ತುಂಬಿ ಹಾಡುವೆನು ಖ್ಯಾತಿಯ ಸಾನ್ವಿ ಜಿ.ಭಟ್,ಇವರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷಿö್ಮ,ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ,ಮುಖಂಡರಾದ ಆರ್.ಎನ್.ಮಂಜುನಾಥ,ಜಿ ಎಸ್ ವರದರಾಜ್ , ಮಂಜುನಾಥ ಕಾಮತ್, ಜಿ.ಡಿ.ಮಲ್ಲಿಕಾರ್ಜುನ,ರಮೇಶ್ ಫ್ಯಾನ್ಸಿ,ನಿರಂಜನ್ , ಆರ್.ಡಿ.ಶೀಲಾ, ಸ್ವಾತಿ, ಲೇಖನ, ಸಾಜಿದ ಹನೀಫ಼್,ಪಿಯೂಸ್ ರೋಡ್ರಿಗಸ್,ನಾಗರಾಜ ಕೆದಲುಗುಡ್ಡೆ, ನಿರ್ಮಲ ಹರೀಶ್. ಸೀಮಾ ಭಾಸ್ಕರ್ ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…

10 hours ago

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ

ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…

12 hours ago

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…

12 hours ago

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ

ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…

12 hours ago

ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು ಆರೋಪ , ಸ್ಥಳಕ್ಕೆ ಅಧಿಕಾರಿಗಳ ದೌಡು

ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…

22 hours ago

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

1 day ago