ಪಟಾಕಿ ಮಾರಾಟ ಮಳಿಗೆ ಮತ್ತು ಗೋದಾಮಿನ ಮೇಲೆ ದಾಳಿ -ಅಕ್ರಮ ದಾಸ್ತಾನು ಇರಿಸಿದ್ದ 2000 ಕೆ.ಜಿ. ಪಟಾಕಿ ವಶ

ಪಟಾಕಿ ಮಾರಾಟ ಮಳಿಗೆ ಮತ್ತು ಗೋದಾಮಿನ ಮೇಲೆ ದಾಳಿ -ಅಕ್ರಮ ದಾಸ್ತಾನು ಇರಿಸಿದ್ದ 2000 ಕೆ.ಜಿ. ಪಟಾಕಿ ವಶ
ಶಿವಮೊಗ್ಗ:  ಅತ್ತಿಬೆಲೆ ಪಟಾಕಿ ಅಂಗಡಿಯ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ರಾಜ್ಯಾದ್ಯಂತ ಎಚ್ಚರಿಕೆ ವಹಿಸುವಂತೆ ಹೇಳಿದ್ದು ಪಟಾಕಿ ಮಾರಾಟ ಕೇಂದ್ರ ಮತ್ತು ಗೋದಾಮುಗಳ ಮೇಲೆ  ಪೊಲೀಸರು, ಕಂದಾಯ ಮತ್ತು ಇತರೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

63 ಪಟಾಕಿ ಅಂಗಡಿ ಮತ್ತು ಗೋದಾಮುಗಳಲ್ಲಿ ಇಲ್ಲಿಯವರೆಗೆ ನಾಲ್ಕು ಮಳಿಗೆ ಮತ್ತು ಗೋದಾಮುಗಳ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. 2000 ಕೆಜಿ ಪಟಾಕಿ ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಉಳಿದ ಅಂಗಡಿಗಳಲ್ಲಿ ಪರವಾನಗಿ ಮತ್ತು ಸುರಕ್ಷತೆಯ ಕ್ರಮದ ಬಗ್ಗೆ ಪರಿಶೀಲನೆ ನಡೆಸಲಾಗಿದೆ.

ಜಿಲ್ಲೆಯ 63 ಪಟಾಕಿಗಳ ಮಾರಾಟ ಮಾಡುವ ಮಳಿಗೆ ಮತ್ತು ಗೋದಾಮುಗಳ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮತ್ತು ಎಸ್ಪಿ ಮಿಥುನ್ ಕುಮಾರ್ ಅವರ ಸೂಚನೆಯ ಮೇರೆಗೆ,  ಶಿವಮೊಗ್ಗ- ಎ ಉಪ ವಿಭಾಗದಲ್ಲಿ ಡಿವೈಎಸ್ಪಿ  ಬಾಲರಾಜ್ ಮತ್ತು ಸುರೇಶ್ ಎಂ, ಭದ್ರಾವತಿ ಉಪ ವಿಭಾಗದಲ್ಲಿ ಡಿವೈಎಸ್ಪಿ  ನಾಗರಾಜ್, ಸಾಗರ ಉಪ ವಿಭಾಗದಲ್ಲಿ ಡಿವೈಎಸ್ಪಿ ಗೋಪಾಲಕೃಷ್ಣ ತಿಮ್ಮಣ್ಣ ನಾಯ್ಕ್,ಶಿಕಾರಿಪುರ ಉಪ ವಿಭಾಗದಲ್ಲಿ ಡಿವೈಎಸ್ಪಿ ಶಿವಾನಂದ್ ಮದರಖಂಡಿ ಮತ್ತು ತೀರ್ಥಹಳ್ಳಿ ಉಪ ವಿಭಾಗದಲ್ಲಿ ಡಿವೈಎಸ್ಪಿ ಗಜಾನನ ವಾಮನ ಸುತಾರ, ಹಾಗೂ ಆಯಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಕಂದಾಯ, ಲೋಕೋಪಯೋಗಿ, ಅಗ್ನಿಶಾಮಕ, ಮೆಸ್ಕಾಂ, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳನ್ನೊಳಗೊಂಡ ಪ್ರತ್ಯೇಖ ತಂಡಗಳು ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆ ಮತ್ತು ಗೋದಾಮುಗಳ ಮೇಲೆ ದಾಳಿ ನಡೆಸಿವೆ.

ಶಿವಮೊಗ್ಗ-ಎ ಉಪ ವಿಭಾಗದಲ್ಲಿ 03, ಶಿವಮೊಗ್ಗ-ಬಿ ಉಪ ವಿಭಾಗದಲ್ಲಿ 03, ಭದ್ರಾವತಿ ಉಪ ವಿಭಾಗದಲ್ಲಿ 21, ಸಾಗರ ಉಪ ವಿಭಾಗದಲ್ಲಿ 09, ಶಿಕಾರಿಪುರ ಉಪ ವಿಭಾಗದಲ್ಲಿ 20, ಮತ್ತು ತೀರ್ಥಹಳ್ಳಿ ಉಪ ವಿಭಾಗದಲ್ಲಿ 07 ಸೇರಿ ಜಿಲ್ಲೆಯಾದ್ಯಂತ ಒಟ್ಟು 63 ಮಳಿಗೆ ಮತ್ತು ಗೋದಾಮುಗಳಲ್ಲಿ ಪಟಾಕಿ ಸಂಗ್ರಹ ಮತ್ತು ಮಾರಾಟಕ್ಕೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಮತ್ತು ಪರವಾನಿಗೆ ಪಡೆದಿರುವ ಬಗ್ಗೆ, ಮಳಿಗೆ ಹಾಗೂ ಗೋದಾಮುಗಳಲ್ಲಿ ಎಲ್ಲಾ ಅವಶ್ಯಕ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುತ್ತಿರುವ ಬಗ್ಗೆ ಮತ್ತು ಪಟಾಕಿ ಮಾರಾಟ ಮಾಡಲು ನಿರ್ಮಿಸಿರುವ ಮಳಿಗೆಗಳು ಸುರಕ್ಷತಾ ದೃಷ್ಠಿಯಿಂದ ಸೂಕ್ತವಿರುವ ಬಗ್ಗೆ ಪರಿಶೀಲನೆ ನಡೆಸಲಾಯಿತು.

ನಿಯಮ ಉಲ್ಲಂಘನೆ ಮಾಡಿ,ಪಟಾಕಿಗಳನ್ನು ಸಂಗ್ರಹಿಸಿಟ್ಟಿದ್ದ ಮತ್ತು ಮಾರಾಟ ಮಾಡುತ್ತಿದ್ದ  ಮಳಿಗೆ / ಗೋದಾಮಿನ ಮಾಲೀಕರ ವಿರುದ್ಧ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ 01, ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ 01 , ವಿನೋಬನಗರ ಪೊಲೀಸ್ ಠಾಣೆಯಲ್ಲಿ 01 ಮತ್ತು ಕೋಟೆ ಪೊಲೀಸ್ ಠಾಣೆಯಲ್ಲಿ 01 ಪ್ರರಕಣ ಸೇರಿದಂತೆ ಒಟ್ಟು 04 ಪ್ರಕರಣಗಳನ್ನು ದಾಖಲಿಸಿ, ಅಂದಾಜು 2,000 ಕೆ.ಜಿ ತೂಕದ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

8 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

8 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

15 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago