ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ|SMG

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ
ಶಿವಮೊಗ್ಗ : ಪತ್ರಕರ್ತರು ತಮ್ಮೊಳಗಿನ ಸಂಘರ್ಷದ ಮನಸ್ಸಿನಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್‌ ಯಡಗೆರೆ ಹೇಳಿದರು.

ಇಲ್ಲಿನ ಪ್ರೆಸ್‌ಟ್ರಸ್ಟ್‌ನಲ್ಲಿ ಭಾನುವಾರ ನಡೆದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ  ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪತ್ರಕರ್ತರ ಕ್ಷೇಮಾಭಿವೃದ್ಧಿ ದೃಷ್ಠಿಯ ಜೊತೆಗೆ ಸಮಾಜಮುಖಿ ಕಾರ್ಯಗಳತ್ತವೂ ಸಂಘ ದಿಟ್ಟ ಹೆಜ್ಜೆ ಇಟ್ಟಿದೆ. ಸಂಘದಿಂದ ಈಗಾಗಲೇ ನಡೆದಿರುವ ಸಮಾಜಮುಖಿ ಕಾರ್ಯಗಳಿಗೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ಬರುತ್ತಿದೆ ಎಂದು ತಿಳಿಸಿದರು.

ಪತ್ರಕರ್ತರ ಸಂಘ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವ ಜೊತೆಗೆ ಸಮಾಜದ ಬೇರೆ, ಬೇರೆ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲ ಮಾಡಬೇಕಾಗುತ್ತದೆ. ಇಂತಹ ಹೊಸ ದಿಕ್ಕಿನಲ್ಲಿ ಆಲೋಚನೆ ಮಾಡಬೇಕಿದೆ. ಸಂಘ ಎಂದ ಮೇಲೆ ಒಬ್ಬೊಬ್ಬರದು ಒಂದೊಂದು ರೀತಿ ಅಭಿಪ್ರಾಯಗಳಿರುತ್ತವೆ. ಇಲ್ಲಿ ಸಣ್ಣ ವ್ಯತ್ಯಾಸಗಳು ಸಹಜ. ನಮ್ಮೊಳಿನ ಸಣ್ಣ ಭಿನ್ನಾಭಿಪ್ರಾಯಗಳನ್ನು ನಾಲ್ಕು ಗೋಡೆಗಳ ಚೌಕಟ್ಟಿನಲ್ಲಿ ಬಗೆಹರಿಸಿಕೊಂಡು ಒಗ್ಗೂಡಿ ಎಲ್ಲರೂ ಮುನ್ನಡೆಯಬೇಕಿದೆ ಎಂದು ಹೇಳಿದರು.

ಪತ್ರಕರ್ತರಿಗೆ ಪ್ರತ್ಯೇಕ ನಿಧಿ:

ಸದಾ ಒತ್ತಡದಲ್ಲೇ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಅಂತಹವರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ ಒಡಗೂಡಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರಿಗೆ ಪ್ರತ್ಯೇಕ ನಿಧಿ ಸ್ಥಾಪನೆ ಮಾಡುವ ಉದ್ದೇಶ ಹೊಂದಲಾಗಿದೆ. ಇದಕ್ಕೆ ಕೆಲ ಗಣ್ಯರು ಒತ್ತಾಸೆಯಾಗಿ ನಿಲ್ಲುವುದಾಗಿ ಹೇಳಿದ್ದಾರೆ. ಈ ಅವಕಾಶವನ್ನು ಎಲ್ಲರೂ ಬಳಸಿಕೊಳ್ಳಬೇಕಿದೆ ಎಂದರು.

ಸಂಘವು ಈವರೆಗೆ ಆನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. ಇದಕ್ಕಾಗಿ ಬೇರೆಯವರ ಬಳಿ ಕೈ ಚಾಚ ಬಾರದು ಎಂಬುದು ಸಂಘದ ನಿಲುವಾಗಿದ್ದು, ಸಂಘದ ಇತಿಮಿತಿಯಲ್ಲೇ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕೆಲ ಕಾರ್ಯಕ್ರಮಗಳಿಗೆ ವಿವಿಧ ಸಂಘ-ಸಂಸ್ಥೆಗಳು ತಮ್ಮೊಂದಿಗೆ ಕೈ ಜೋಡಿಸಿವೆ. ಕೆಲ ದಾನಿಗಳು ನಮಗೆ ಸಹಕಾರ ನೀಡಿದ್ದಾರೆ. ಜೊತೆಗೆ ಪದಾಧಿಕಾರಿಗಳಿಂದಲೂ ಹಣ ಸಂಗ್ರಹ ಮಾಡಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದು ವಿವರಿಸಿದರು.

ಸಂಘದ 2022ನೇ-23ನೇ ಸಾಲಿನ ವಾರ್ಷಿಕ ವರದಿ ವಾಚಿಸಿದ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್‌ ಕಾಚಿನಕಟ್ಟೆ, ಸಂಘದ ಉದ್ಘಾಟನೆ ಜೊತೆಗೆ ಮಾದಕ ವಸ್ತು ನಿರ್ಮೂಲನೆ ಅಭಿಯಾನ ನಡೆಸಲಾಯಿತು. ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಮಹಿಳಾ ನಾಟಕೋತ್ಸವ ನಡೆಯಿತು. ಗ್ರಾಮ ಭೇಟಿ ನಡೆಸಿ ಅಲ್ಲಿನ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡಸಲಾಯಿತು.  ಈ ಎಲ್ಲ ಕಾರ್ಯಕ್ರಮಗಳಿಗೂ ಉತ್ತಮ ಪ್ರತಿಕ್ರಿಯೆ ವ್ಯಕಕ್ತವಾಗಿದೆ. ಮುಂದೆ ಇದೇ ರೀತಿ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು. ಅವುಗಳ ಈಡೇರಿಕೆಗೆ ಎಲ್ಲರೂ ಕೈಜೋಡಿಸಬೇಕಿದೆ ಎಂದರು.

ಸಭೆ ಆರಂಭದಲ್ಲಿ ಅಗಲಿದ ಪತ್ರಕರ್ತರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಸಂಘದ ನಿರ್ದೇಶಕ ವಿವೇಕ್‌ ಮಹಾಲೆ ವಾರ್ಷಿಕ ಸಭೆಯ ನೊಟೀಸ್‌ ಓದಿದರು. ನಿರ್ದೇಶಕ ಯೋಗೇಶ್‌  ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷ ಹುಲಿಮನೆ ತಿಮ್ಮಪ್ಪ ಸ್ವಾಗತಿಸಿದರು. ಸಂತೋಷ್‌ ಕಾಚಿನಕಟ್ಟೆ ವಂದಿಸಿದರು. ನಿರ್ದೇಶಕ ರಾಮಚಂದ್ರ ಗುಣಾರಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಖಜಾಚಿ ಶಿವಮೊಗ್ಗ ನಂದನ್‌, ದೇರಿದಂತೆ ನಿರ್ದೇಶಕರು, ಕಾರ್ಯಕಾರಣಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಮಕ್ಕಳಿಗೆ ಪ್ರತಿಭಾ ಪುರಸ್ಕಾರ


ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ  ಸರ್ವಸದಸ್ಯರ ವಾರ್ಷಿಕ ಮಹಾಸಭೆ ಬಳಿಕ ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ ಸಹಯೋಗದಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.

ಸಮಾರಂಭವನ್ನು ಉದ್ಘಾಟಿಸಿ ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ ಅಧ್ಯಕ್ಷ ಎನ್‌.ಮಂಜುನಾಥ್‌ ಮಾತನಾಡಿ, ಸಜ್ಜನ ಪತ್ರಕರ್ತರು ಒಂದೆಡೆ ಸೇರಿಸಬೇಕು ಎಂಬ ಉದ್ದೇಶದಿಂದ ಈ ಸಂಘ ರಚನೆಯಾಗಿದೆ. ಸಂಘ ಯಾರೊಬ್ಬರ ಸ್ವತ್ತಲ್ಲ. ಎಲ್ಲರೂ ಸಂಗದ ಕಾರ್ಯಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಂಘದ ಸಂಘಟನೆಗೆ ಬಲ ನೀಡಬೇಕಿದೆ. ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ ಕೇವಲ ಪತ್ರಕರ್ತರಿಗೆ ಕ್ಷೇಮಾಭಿವೃದ್ಧಿಗೆ ಮಾತ್ರ ಸೀಮಿತವಾಗಿಲ್ಲ. ಪತ್ರಿಕಾ ವಿತರಕರಿಗೂ ಸೌಲಭ್ಯ ಕೊಡಿಸುವ ನಿಟ್ಟಿನಲ್ಲಿ ಈ ಎರಡೂ ಸಂಘಟನೆಗಳು ಶ್ರಮಿಸುತ್ತಿವೆ ಎಂದು ತಿಳಿಸಿದರು.

ಇದೇ ಸಂದರ್ಭ ಸಂಘದ ಸದಸ್ಯರ ಮಕ್ಕಳಾದ ವೈ.ಎಸ್.ಅನಿಕೇತನ್, ಅಚಲ ದತ್‌, ದೀಪಿಕ ಜಿ.ಸ್ವಾಮಿ, ನಮ್ರತಾ, ತಪಸ್ಯ ಆರ್.ಭಟ್, ಸಾನಿಯಾ ಎಸ್.ಜುಬೇರ್, ಬಿ.ಸಿಂಚನ, ಜೋಸ್ಲಿನ್ ಹೆಲೆನ್ ಟೆಲಿಸ್, ಯೋಗರಾಜ ವಿವೇಕ್ ಮಹಾಲೆ, ಸಿ.ಜಿ.ಐಶ್ವರ್ಯ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

1 hour ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

4 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

16 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

16 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

18 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

18 hours ago