ಪದವೀಧರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ.? ದಾಖಲೆಗಳೇನು? ಇಲ್ಲಿದೆ ಮಾಹಿತಿ|election

ರಿಪ್ಪನ್‌ಪೇಟೆ : ಕೆಲವೇ ದಿನಗಳಲ್ಲಿ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗೋ ಸಾಧ್ಯತೆ ಇದೆ. ಇದಕ್ಕೂ ಮುನ್ನಾ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ಪಟ್ಟಿ ತಯಾರಿಕೆ ಕೂಡ ಆರಂಭಗೊಂಡಿದೆ.

ಮುಂಬರುವ ವಿಧಾನ ಪರಿಷತ್ ಚುನಾವಣೆಗಾಗಿ ಮತದಾರರ ಪಟ್ಟಿ ತಯಾರಿಕೆಗೆ ಸಿದ್ಧತೆಯನ್ನು ಚುನಾವಣಾ ಆಯೋಗ ಆರಂಭಿಸಿದೆ. ಇಂತಹ ಮತದಾರರ ಪಟ್ಟಿಗೆ ಪದವೀಧರರಾದಂತ ನೀವು ಅರ್ಜಿಯನ್ನು ಸಲ್ಲಿಸೋದು ಹೇಗೆ.? ಅರ್ಹತೆಗಳು ಏನು ಅನ್ನೋ ಬಗ್ಗೆ ಕೂಡ ಮಾಹಿತಿ ನೀಡಿದೆ.

ಈ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ಬಳಗದ ವತಿಯಿಂದ ರಿಪ್ಪನ್‌ಪೇಟೆಯ ಪೋಸ್ಟ್ ಮ್ಯಾನ್ ನ್ಯೂಸ್ ಕಛೇರಿಯಲ್ಲಿ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ.ಇದರ ಸದುಪಯೋಗವನ್ನು ಎಲ್ಲಾ ಪದವೀಧರರು ಹಾಗೂ ಶಿಕ್ಷಕರು ಪಡೆದುಕೊಳ್ಳುವಂತೆ ಪೋಸ್ಟ್ ಮ್ಯಾನ್ ನ್ಯೂಸ್ ನ ಮುಖ್ಯಸ್ಥರಾದ ರಫ಼ಿ ರಿಪ್ಪನ್‌ಪೇಟೆ ತಿಳಿಸಿದ್ದಾರೆ.

ಅರ್ಹತೆ

ಪದವೀಧರ ಕ್ಷೇತ್ರದ ಚುನಾವಣೆಗೆ PUC ಮುಕ್ತಾಯದ ನಂತರ ಮೂರು ವರ್ಷದ ಸ್ನಾತಕ ಪದವಿ ಪಡೆದು ಮೂರು ವರ್ಷ ಕಳೆದಿರಬೇಕು. ಅಂದರೆ 2020ರ ಮೊದಲು ಪದವಿಯನ್ನು ಪಡೆದವರು ಅರ್ಜಿಯನ್ನು ಸಲ್ಲಿಸಬಹುದು.

ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ಪಟ್ಟಿಗೆ ಅರ್ಜಿಯನ್ನು ಸಲ್ಲಿಸೋರು ಬಿಎ, ಬಿಇಡಿ ಪದವಿಯನ್ನು ಪಡೆದು ಒಂದು ಸಂಸ್ಥೆಯಲ್ಲಿ 3 ವರ್ಷದಿಂದ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿರಬೇಕು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ.?

ನೀವು ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅರ್ಜಿಯನ್ನು ಸಲ್ಲಿಸಬೇಕಾದ್ರೇ ಕೆಲವು ಸೂಕ್ತ ಅರ್ಜಿ ನಮೂನೆಯಲ್ಲಿ ಸಲ್ಲಿಸಬೇಕಾಗಿದೆ.

ಅರ್ಜಿ ನಮೂನೆ-18ರಲ್ಲಿ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಸೇರ್ಪಡೆ ಮಾಡೋದಕ್ಕೆ ನೀವು ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ-19ರಲ್ಲಿ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ನೋಂದಾಯಿಸಿಕೊಳ್ಳೋದಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸಲ್ಲಿಸಬೇಕಾದ ದಾಖಲೆಗಳು ಏನು.?

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ನಿಮ್ಮ ಹೆಸರು ನೋಂದಾಯಿಸಿಕೊಳ್ಳೋದಕ್ಕೆ ಕೆಲವು ದಾಖಲೆಗಳನ್ನು ಅರ್ಜಿಯ ಜೊತೆಗೆ ಸಲ್ಲಿಸೋದು ಕಡ್ಡಾಯವಾಗಿದೆ. ಅವುಗಳು ಈ ಕೆಳಗಿನಂತಿವೆ

-ಪದವಿ ಪ್ರಮಾಣಪತ್ರದ ನಕಲು ಪ್ರತಿ

-ಆಧಾರ್ ಕಾರ್ಡ್

-ವೋಟರ್ ಐಡಿ

-ಪಾಸ್ ಪೋರ್ಟ್ ಅಳತೆಯ ಪೋಟೋ.

ಈ ಎಲ್ಲಾ ದಾಖಲೆಗಳನ್ನು ಅರ್ಜಿಯ ಜೊತೆಗೆ ಸಲ್ಲಿಸಬೇಕು. ಈ ನಕಲು ಪ್ರತಿಗಳಿಗೆ ಗೆಜೆಟೆಡ್ ಅಧಿಕಾರಿ ಅಥವಾ ನೋಟರಿ ಮಾಡಿಸಿ ದೃಢೀಕರಣದೊಂದಿಗೆ ನೀವು ಅರ್ಜಿಯನ್ನು ಸಲ್ಲಿಸಬೇಕಾಗಿದೆ.

ಕೊನೆಯ ದಿನಾಂಕ ಎಂದು?

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ನೀವು ಮತದಾರರ ಪಟ್ಟಿಗೆ ನೋಂದಾಯಿಸಿಕೊಳ್ಳೋದಕ್ಕೆ ಕೊನೆಯ ದಿನಾಂಕ 06-11-2023 ಆಗಿದೆ. ಈ ದಿನಾಂಕದ ಒಳಗಾಗಿ ನೀವು ಮತದಾರರ ಪಟ್ಟಿಗೆ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳೋದು ಮರೆಯಬೇಡಿ.

ಅರ್ಜಿ ಪಡೆದುಕೊಳ್ಳಬೇಕಾದ ಕಛೇರಿಯ ವಿಳಾಸ ;

ಪೋಸ್ಟ್ ಮ್ಯಾನ್ ನ್ಯೂಸ್ ಕಛೇರಿ
ರಿಪ್ಪನ್‌ಪೇಟೆ ಆಪ್ಟಿಕಲ್ಸ್
RBS ಕಾಂಪ್ಲೆಕ್ಸ್ ,ಆಟೋ ನಿಲ್ದಾಣದ ಎದುರು
ವಿನಾಯಕ ವೃತ್ತ ,ರಿಪ್ಪನ್‌ಪೇಟೆ
ಹೊಸನಗರ (ತಾ)
ಮೊ; 9663420169
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

3 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

3 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

10 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago