Headlines

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ|job alert

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 12 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಅರವಳಿಕೆ ತಜ್ಞರ 04 ಹುದ್ದೆಗಳು ಹಾಗೂ ಪ್ರಸೂತಿ ತಜ್ಞರ 03 ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರರು ಮತ್ತು ತಜ್ಞ ವೈದ್ಯರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅ.17ರಂದು ಬೆಳಗ್ಗೆ 11.00ರಿಂದ ಮ.1.00 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ, ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿ ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-222382 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

About The Author

Leave a Reply

Your email address will not be published. Required fields are marked *