ಬಸ್ ಹತ್ತುವಾಗ ಆಯತಪ್ಪಿ ಬಿದ್ದು ಮಹಿಳೆ ಸಾವು
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಮಾಚೇನಹಳ್ಳಿ ಸಮೀಪ ಕೆಎಸ್‌ಆರ್ಟಿಸಿ ಬಸ್ ಹತ್ತುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ರಾಜೇಶ್ವರಿ ಮೃತಪಟ್ಟ ಮಹಿಳೆ ಎನ್ನಲಾಗಿದೆ.
ಶಿವಮೊಗ್ಗ -ಭದ್ರಾವತಿ ನಡುವೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಒಂದೇ ಬದಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಭದ್ರಾವತಿಯ ರಾಜೇಶ್ವರಿ ಮಾಚೇನಹಳ್ಳಿಗೆ ಕೆಲಸಕ್ಕೆ ಹೋಗಿ ಬರುವಾಗ ಬಸ್ ಹತ್ತಲು ಮುಂದಾಗಿದ್ದಾರೆ. ಹೆಚ್ಚಿನ ಜನರಿದ್ದ ಕಾರಣ ಬಸ್ ಹೊರಡುವ ವೇಳೆ ಅವರು ಆಯತಪ್ಪಿ ಕೆಳಗೆ ಬಿದ್ದಿದ್ದು, ಬಾಯಿ ಮತ್ತು ಕಿವಿಯಲ್ಲಿ ರಕ್ತಸ್ರಾವವಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೂಡಲೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಈ ವೇಳೆಗಾಗಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…
ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…
ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…