ಹೊಸನಗರ: ಮಧ್ಯರಾತ್ರಿ 16 ಚಕ್ರದ ಲಾರಿಯೊಂದು ಪಲ್ಟಿಯಾದ ಘಟನೆ ಹೊಸನಗರ ತಾಲೂಕು ಯಡೂರಲ್ಲಿ ಶನಿವಾರ ತಡ ರಾತ್ರಿ ನಡೆದಿದೆ. 
 ಶನಿವಾರ ರಾತ್ರಿ 12 ಗಂಟೆಯ ಸುಮಾರಿಗೆ ಯಡೂರು ಸಮೀಪದ ಮೈನ್ ಸರ್ಕಲ್ ಬಳಿ 16 ಚಕ್ರ ಟಿಂಬರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು ಚಾಲಕರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 
 ಸ್ಥಳೀಯರು ತಕ್ಷಣ ಸಮಯ ಪ್ರಜ್ಞೆ ಮೆರೆದು ಲಾರಿಯಲ್ಲಿದ್ದವರಿಗೆ ಸಹಾಯ ಮಾಡಿ ಆಂಬುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.
 ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
  


