Headlines

ರಾಗಿಗುಡ್ಡ ಭೇಟಿಗೆ ತೆರಳುತಿದ್ದ ಪ್ರಮೋದ್ ಮುತಾಲಿಕ್ ರನ್ನು ಮಾಸ್ತಿಕಟ್ಟೆಯಲ್ಲೇ ತಡೆದ ಪೊಲೀಸರು – 30 ದಿನ ಜಿಲ್ಲೆಗೆ ಪ್ರವೇಶಿಸದಂತೆ ನೋಟಿಸ್

ಶಿವಮೊಗ್ಗ : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಶಿವಮೊಗ್ಗ ಭೇಟಿಗಾಗಿ ಮಂಗಳೂರಿನಿಂದ ಬರುತಿದ್ದ ವೇಳೆಯಲ್ಲಿ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ತಡೆದು ಪ್ರತ್ಯೇಕ ಕಾರಿನಲ್ಲಿ ದಾವಣಗೆರೆಗೆ ಕಳುಹಿಸಿಕೊಟ್ಟಿದ್ದಾರೆ.

ಹೌದು, ಪ್ರಮೋದ್ ಮುತಾಲಿಕ್ ಶಿವಮೊಗ್ಗ ಭೇಟಿಗೆ 30 ದಿನ ನಿರ್ಬಂಧ ವಿಧಿಸಲಾಗಿದೆ.ಶಿವಮೊಗ್ಗ ಜಿಲ್ಲೆಗೆ ಪ್ರವೇಶ ಮಾಡದಂತೆ ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಇಲಾಖೆ ಕೋರಿಕೆ ಮೇರೆಗೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಪ್ರಮೋದ್ ಮುತಾಲಿಕ್ ಮಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ಪೊಲೀಸರು ಪ್ರಮೋದ್ ಮುತಾಲಿಕ್ ತಡೆದಿದ್ದಾರೆ. ಪ್ರಮೋದ್ ಇಂದು ಶಿವಮೊಗ್ಗದ ರಾಗಿಗುಡ್ಡಕ್ಕೆ ಬರುತ್ತಿದ್ದರು. ಅವರನ್ನು ತಡೆದ ಪೊಲೀಸರು ನಿರ್ಬಂಧ ಆದೇಶದ ಪ್ರತಿ ನೀಡಿ ಪ್ರತ್ಯೇಕ ಕಾರಿನಲ್ಲಿ ದಾವಣಗೆರೆಗೆ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. 

ಮುತಾಲಿಕ್ ಭಾಷಣದಿಂದ ಶಾಂತಿ ಕದಡುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮುಂದಿನ 30 ದಿನಗಳವರೆಗೆ ಶಿವಮೊಗ್ಗ ಜಿಲ್ಲೆಗೆ ಪ್ರವೇಶಿಸದಂತೆ ಪ್ರಮೋದ್ ಮುತಾಲಿಕ್ಗೆ ನಿರ್ಬಂಧ ಹೇರಲಾಗಿದೆ.

About The Author

Leave a Reply

Your email address will not be published. Required fields are marked *