ರಿಪ್ಪನ್‌ಪೇಟೆ : ಚಲಿಸುತ್ತಿದ್ದ ಬಸ್‌ನಿಂದ ಮಗುವಿನೊಂದಿಗೆ ಕೆಳಗೆ ಬಿದ್ದ ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಕೋಡೂರು ಸಮೀಪದ ಶಾಂತಪುರದಲ್ಲಿ ಈ ಘಟನೆ ನಡೆದಿದೆ.
ಬಸ್‌ನಲ್ಲಿ ಅಧಿಕ ಜನರಿದ್ದು ತಿರುವಿನಲ್ಲಿ ಚಾಲಕ ಅತಿವೇಗದಲ್ಲಿ ಬಸ್ ಚಲಾಯಿಸಿದ್ದರಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಹೊಸನಗರದಿಂದ ಶಿವಮೊಗ್ಗ ಕಡೆ ಹೊರಟಿದ್ದ ಗುರುಶಕ್ತಿ ಬಸ್ ಗೆ ಕೀಳಂಬಿ ನಿಲ್ದಾಣದಲ್ಲಿ ಮಗುವಿನೊಂದಿಗೆ ಬಸ್ ಹತ್ತಿದ ವ್ಯಕ್ತಿ 200 ಮೀ ಸಾಗುವಷ್ಟರಲ್ಲಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಮಗುವಿನೊಂದಿಗೆ ಕೆಳಗೆ ಬಿದ್ದಿದ್ದಾರೆ.
ಘಟನೆಯಲ್ಲಿ ವ್ಯಕ್ತಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಈತನನ್ನು ಚಿಕ್ಕಜೇನಿ ವ್ಯಕ್ತಿ ಎಂದು ಗುರುತಿಸಲಾಗಿದೆ.ಮಗುವಿಗೆ ಅದೃಷ್ಟವಶಾತ್ ಯಾವುದೇ ಗಾಯಗಳಾಗಿರುವುದಿಲ್ಲ
ಗಾಯಾಳುಗಳಿಗೆ ಕೋಡೂರು ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಆ್ಯಂಬುಲೆನ್ಸ್ ಮೂಲಕ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.