ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಎರಡು ವರ್ಷ-PRK

ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಎರಡು ವರ್ಷ
ಮೊನ್ನೆ ಮೊನ್ನೆ ನಡೆದಿದೆಯೇನೋ.. ಎಂಬ ಭಾವನೆ ಇಂದಿಗೂ ಜನರ ಮನಸ್ಸಿನಲ್ಲಿದೆ. ಅಪ್ಪು ಅಗಲಿಕೆಗೆ ಆಗಲೇ ಎರಡು ವರ್ಷ. ಆ ದಿನ ಇಡೀ ಕರುನಾಡು ಕಣ್ಣೀರಿಟ್ಟಿತ್ತು.

ಕರ್ನಾಟಕ ರತ್ನ ಡಾ| ಪುನೀತ್ ರಾಜ್‍ಕುಮಾರ್ ರವರ ದ್ವಿತೀಯ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದ ವತಿಯಿಂದ ಪುನೀತ್ ಕಟೌಟ್ ಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು.


ಈ ಸಂಧರ್ಭದಲ್ಲಿ ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಉಲ್ಲಾಸ್ ತೆಂಕೋಲ್,ಪ್ರಧಾನ ಕಾರ್ಯದರ್ಶಿ ಚಿಗುರು ಶ್ರೀಧರ್, ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್,ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಮುಖಂಡರಾದ ಅರ್ ಎ ಚಾಬುಸಾಬ್, ಮಂಜುನಾಥ್ ಕಾಮತ್ ,ಆನಂದ್ ಮೆಣಸೆ,ಆರ್ ಎನ್ ಮಂಜುನಾಥ್ , ಮಲ್ಲಿಕಾರ್ಜುನ್, ಹಸನಬ್ಬ,ಆರ್ ಎಸ್ ಶಂಶುದ್ದೀನ್, ರಮೇಶ್ ಫ್ಯಾನ್ಸಿ, ಶೀಲಾ ಆರ್ ಡಿ ,ಯೋಗೇಂದ್ರಪ್ಪ ಗೌಡ ಪ್ರಕಾಶ್ ಪಾಲೇಕರ್ ,ಸಾಜೀದಾ ಹನೀಫ಼್,ನಿರ್ಮಲ ,ಸೀಮಾ,ನಿರಂಜನ್ ಕನ್ನಡಿಗ, ವಿಜಯ್ ಹಾಗೂ ಇನ್ನಿತರರಿದ್ದರು.

ಬಾಲ್ಯದಲ್ಲಿಯೇ ಸಿನಿಮಾ ಜಗತ್ತಿಗೆ ಕಾಲಿಟ್ಟ ಅಪ್ಪು ಪ್ರೇಕ್ಷಕರಿಗೆ ಮನರಂಜನಾ ಸಿನಿಮಾದ ಔತಣ ನೀಡಿದರು. ಎರಡನೇ ವರ್ಷದ ಸ್ಮರಣೆಯ ಸಂದರ್ಭದಲ್ಲಿ, ಅವರ ಸಮಾಜಮುಖಿ ಸಂದೇಶ ನೀಡುವ ಚಲನಚಿತ್ರಗಳು ಕೇವಲ ಮನರಂಜನೆಯನ್ನು ಮಾತ್ರವಲ್ಲದೆ ಪ್ರಮುಖ ಸಾಮಾಜಿಕ ಸಂದೇಶಗಳನ್ನ ನೀಡುವಂತಹ ಸಿನಿಮಾಗಳನ್ನ ಮಾಡಿ ನಮ್ಮೆಲ್ಲರಿಗೆ ಪ್ರೇರಣೆ ನೀಡಿದ್ದಾರೆ

ಅಪ್ಪು ಕೇವಲ ಸಿನೆಮಾಗಳಿಗೆ ಮಾತ್ರ ಸೀಮಿತವಾಗಿರದೆ ಸಿನೆಮಾ ಗಳಲ್ಲಿ ತೋರಿಸಿದ ರೀತಿಯಲ್ಲೇ ನಿಜ ಜೀವನದಲ್ಲಿ ಅನೇಕ ಸಮಾಜಮುಖಿ ಸೇವೆಗಳನ್ನು ಮಾಡಿ ಜನರಿಗೆ ಸ್ಪೂರ್ತಿ ನೀಡಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಎರಡು ವರ್ಷಗಳು ಕಳೆದರೂ ಅವರ ಪರಂಪರೆ ಕರುನಾಡಿನ ಜನರ ಹೃದಯದಲ್ಲಿ ವಿಜೃಂಭಿಸುತ್ತಲೇ ಇದೆ. ಪುನೀತ್ ರಾಜ್‌ಕುಮಾರ್ ಅವರನ್ನು ಜನರು ಅಭಿಮಾನಿಗಳು ಇನ್ನೂ ಪ್ರೀತಿಸುತ್ತಿದ್ದಾರೆ ಮತ್ತು ಅವರ ಸ್ಮರಣೆಯು ವಿವಿಧ ರೀತಿಯಲ್ಲಿ ಜನರಿಗೆ ಉತ್ತಮ ಮಾರ್ಗವನ್ನು ನೀಡುತ್ತದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

1 hour ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

4 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

16 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

16 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

18 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

18 hours ago