ರಿಪ್ಪನ್ ಪೇಟೆ : ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ರಿಪ್ಪನ್‌ಪೇಟೆ : ಪಟ್ಟಣದ ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕಬ್ಬಡ್ಡಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಬುಧವಾರ ನಡೆದ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಗ್ರಾಮೀಣ ಪ್ರದೇಶವಾದ ರಿಪ್ಪನ್ ಪೇಟೆ ಪಟ್ಟಣದ ವಿದ್ಯಾರ್ಥಿಗಳ ಈ ಸಾಧನೆಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
ಶಿವಮೊಗ್ಗ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಈ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ , ದೈಹಿಕ ಶಿಕ್ಷಣಾಧಿಕಾರಿ ಬಾಲಚಂದ್ರ ರಾವ್, ಗುಡ್ ಶೆಪರ್ಡ್ ಶಾಲೆಯ ಕಾರ್ಯದರ್ಶಿ ಹಾಗೂ ಧರ್ಮ ಗುರು ರೆ. ಫಾ. ಬಿನೋಯ್,ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಜೋಸ್ಫಿನ್, ದೈಹಿಕ ಶಿಕ್ಷಕ ಬಿದರಳ್ಳಿ ಸುರೇಶ್,ಎಸ್ ಡಿ ಎಂಸಿ ಸದಸ್ಯರು, ಶಿಕ್ಷಕರು, ಪೋಷಕರು, ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.