ಶಿವಮೊಗ್ಗ – ಇಲ್ಲಿನ ಬೊಮ್ಮನಕಟ್ಟೆ ರೈಲ್ವೆ ಗೇಟ್‌ನ ಕಂಬಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ.
ನವುಲೆ ಕಡೆಯಿಂದ ಬಂದ ಕಾರು ಏಕಾಏಕಿ ರೈಲ್ವೆ ಗೇಟ್‌ಗೆ ಡಿಕ್ಕಿಯಾದ ಹಿನ್ನಲೆಯಲ್ಲಿ ಕಾರು ಪಲ್ಟಿಯಾಗಿದೆ.ಕಾರನ್ನು ಮಹಿಳೆಯೊಬ್ಬರು ಚಲಾಯಿಸುತಿದ್ದು ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಕಾರಿನಲ್ಲಿ ಮಹಿಳೆ ಮತ್ತು ಅವರ ಮಗಳು ಇದ್ದರು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.