ಶಿವಮೊಗ್ಗದಲ್ಲಿ ಯಾವುದೇ ಎನ್‌ಕೌಂಟರ್ ನಡೆದಿಲ್ಲ,ಅದೆಲ್ಲಾ ಸುಳ್ಳು ಸುದ್ದಿ: ಎಸ್ಪಿ ಸ್ಪಷ್ಟನೆ
ಶಿವಮೊಗ್ಗ: ರಾಗಿಗುಡ್ಡದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮುಸ್ಲಿಮ್ ಯುವಕ ಸಾವಿಗೀಡಾಗಿದ್ದಾನೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದು ಸುಳ್ಳು‘ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ‘ರಾಗಿಗುಡ್ಡದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಪೊಲೀಸರಿಂದ ಎನ್‌ಕೌಂಟರ್ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದವರ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಾಗಿದೆ‘ ಎಂದು ತಿಳಿಸಿದರು.
ನಗರದ ರಾಗಿಗುಡ್ಡದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ಒಮ್ನಿ ವಾಹನಗಳಲ್ಲಿ ಬಂದು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ʼʼಒಮ್ನಿ ವಾಹನದಲ್ಲಿ ಬಂದವರು ದಾವಣಗೆರೆ ಜಿಲ್ಲೆ ನ್ಯಾಮತಿಯವರು. ವಾಹನದಲ್ಲಿ ಮುಸ್ಲಿಮರು ಮಾತ್ರವಲ್ಲ ಹಿಂದೂಗಳು ಇದ್ದರು. ಎಲ್ಲರೂ ಸ್ನೇಹಿತರು. ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ನೋಡಲು ಬಂದವರು ರಾಗಿಗುಡ್ಡಕ್ಕೂ ಬಂದಿದ್ದಾರೆ. ಅಲ್ಲಿ ಗಲಾಟೆ ಆರಂಭವಾಗುತ್ತಿದ್ದಂತೆಯೇ ಅವರೆಲ್ಲರೂ ತಮ್ಮೂರಿಗೆ ಮರಳಿದ್ದಾರೆʼʼ ಎಂದು ತಿಳಿಸಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್