Headlines

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!??|SMG

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!??

ಸಮಾಜದಲ್ಲಿ ಶಾಂತಿಯನ್ನು ಕದಡುವವರು ಮತ್ತು ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು.

ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಿವಮೊಗ್ಗ ನಗರದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಚೋದನಕಾರಿ ಹೇಳಿಕೆ ನೀಡುವವರಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಎಲ್ಲ ಮಾಹಿತಿ ತೆಗೆದುಕೊಂಡಿದ್ದೇನೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಅಧಿಕಾರಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದರು.

ಟಿಪ್ಪು ಭಾವಚಿತ್ರ ಪ್ರದರ್ಶನದಿಂದ ಘಟನೆ ಆಗಿದೆ ಎಂದು ಹೇಳುತ್ತಿದ್ದಾರೆ. ಮನೆಗಳ ಮೇಲೆ ಕಲ್ಲು ತೂರಾಟ ಆಗಿದೆ. ನಾನು ಜನಪ್ರತಿನಿಧಿಯಾಗಿ ನನ್ನ ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಕೆಲಸ ಆಗುತ್ತಿದೆ. ಪ್ರಕರಣದ ತನಿಖೆಯನ್ನು ತನಿಖಾಧಿಕಾರಿಗಳು ಮಾಡುತ್ತಾರೆ. ಕಾನೂನು ಮೀರಿ ಹೋದವರ ಕ್ರಮ ಮಾಡುತ್ತೇವೆ. ಇಂತಹ ಘಟನೆಗಳಲ್ಲಿ ರಾಜಕೀಯ ಮಾಡಿ ಅವಕಾಶ ಮಾಡಿಕೊಳ್ಳುತ್ತಾರೆ. ಇದರಲ್ಲಿ ನಾನು ರಾಜಕೀಯ ಮಾಡುವುದಿಲ್ಲ ಎಂದರು.

ಸಮಾಜದಲ್ಲಿ ಕೆಟ್ಟವರನ್ನು ನಾವು ತಿದ್ದುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿಯವರ ಮೂರ್ತಿಯನ್ನು ದ್ವಂಸ ಮಾಡಿದ್ದರು. ಇಂತಹ ವಿಕೃತ ಮನಸ್ಸುಗಳ ತಲೆ ಹರಟೆ ಕೆಲಸಗಳನ್ನು ನಿಲ್ಲಿಸಬೇಕು. ಇದು ಸರ್ಕಾರದ ಜವಾಬ್ದಾರಿ ಮಾತ್ರವಲ್ಲ, ಸಮಾಜದ ಜವಾಬ್ದಾರಿ ಕೂಡ ಇರುತ್ತದೆ. ಎಲ್ಲರೂ ಸೇರಿ ಶಾಂತಿ ನಿರ್ಮಾಣ ಮಾಡುವ ಕೆಲಸ ಮಾಡಬೇಕು ಎಂದರು.

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆಗೆ ಅಧಿಕಾರಿಗಳೇ ಅವಕಾಶ ಮಾಡಿಕೊಟ್ಟಿದ್ದು ಬೇಸರವಿದೆ. ಮುಸ್ಲಿಂ ಓಲೈಕೆ ಕೆಲಸವನ್ನ ಸರ್ಕಾರ ಮಾಡುತ್ತಿದೆ. ಇದು ವಿಶೇಷ ಏನಿಲ್ಲ ಅಧಿಕಾರಿಗಳು ಕೂಡ ಅದನ್ನೇ ಮಾಡುತ್ತಿದ್ದಾರೆ. ಒಂದು‌ ಧರ್ಮದ ಓಲೈಕೆಯ ಕೆಲಸ ನಡೆಯುತ್ತಿದೆ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಹಿಂದೂ ಮಹಾಸಭಾ ಶಾಂತಿಯುತವಾಗಿ ಗಣೇಶ ವಿಸರ್ಜನೆ ಮಾಡಲಾಗಿದೆ. ಇನ್ನೊಂದು ಧರ್ಮದ ಭಾವನೆಗೆ ಧಕ್ಕೆ ಮತ್ತು ಪ್ರಚೋದನೆ ಮಾಡುವ ರೀತಿ ಫ್ಲೆಕ್ಸ್, ಬ್ಯಾನರ್ ಖಡ್ಗವನ್ನು ಬಳಸಿದ್ದರು. ತಲ್ವಾರ್ ಹಾಗೂ ಆಯುಧಗಳನ್ನು ಹಿಡಿದು ಮೆರವಣಿಗೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಸಂಸದ ಬಿ ವೈ ರಾಘವೇಂದ್ರ ಹೇಳಿದ್ದೇನು..???

ಹಿಂದೂಗಳ ರಕ್ಷಣೆ ಮಾಡಲು ಬಂದವರ ಮೇಲೆ ಕೇಸ್ ದಾಖಲಿಸಿದ್ದಾರೆ. ಸರ್ಕಾರ ಒಂದು ಧರ್ಮದ ಓಲೈಕೆ ಮಾಡುವ ಕೆಲಸವನ್ನು ಮಾಡುತ್ತಿದೆ. ಹೊರ ರಾಜ್ಯದಿಂದ ವಾಹನಗಳು ಬಂದಿವೆ, ಈ ಬಗ್ಗೆ ತನಿಖೆಯಾಗಬೇಕು ಎಂದಿದ್ದಾರೆ.

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆಯಲ್ಲಿ ಗಾಯಗೊಂಡಿರುವವರನ್ನು ಮೆಗ್ಗಾನ್​ ಆಸ್ಪತ್ರೆಯಲ್ಲಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಗಲಾಟೆ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ.

ಸಂಸದ ರಾಘವೇಂದ್ರಗೆ ದೂರು ನೀಡಿದ ಗಾಯಾಳುಗಳು

ಸುಮ್ನೆ ನಿಂತಿಕೊಂಡವರ ಮೇಲೆ ಕಲ್ಲಿನಿಂದ ದಾಳಿ ನಡೆಸಿದ್ದಾರೆ. ಹಸಿರು ಮಾಸ್ಕ್ ಕಟ್ಟಿಕೊಂಡು ನಮ್ಮ ಮೇಲೆ ದಾಳಿ ನಡೆಸಿದ್ದಾರೆ. ಹೊಡತ ತಿಂದವರನ್ನು ಆರೋಪಿಗಳನ್ನಾಗಿ ಮಾಡಿದ್ದಾರೆ ಎಂದು ಪೊಲೀಸರ ವಿರುದ್ದವೇ ಗಾಯಾಳುಗಳು ಆರೋಪ ಮಾಡಿದ್ದಾರೆ. ಅತಿರೇಖವಾಗಿ ಮಾಡಿದ್ದಾರೆ, ಮಿನಿ ಪಾಕಿಸ್ತಾನವನ್ನಾಗಿ ಮಾಡಿದ್ದಾರೆ. ಧರ್ಮ ಆಚರಣೆ ಮಾಡಲಿ ನಮ್ಮ ವಿರೋಧ ಇಲ್ಲ. ಇವರು ಪರ್ಸನಲ್‌ ಆಗಿ ತೆಗದುಕೊಂಡು ಈ ರೀತಿ ಮಾಡಿದ್ದಾರೆ ಎಂದು ಸಂಸದ ರಾಘವೇಂದ್ರಗೆ ಗಾಯಾಳುಗಳು ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *