January 11, 2026

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ನಾನು ಪ್ರಬಲ ಟಿಕೆಟ್ ಆಕಾಂಕ್ಷಿ – ಬೇಳೂರು ಗೋಪಾಲಕೃಷ್ಣ|gkb

ಶಿವಮೊಗ್ಗ ಲೋಕಸಭಾ ಚುನಾಣೆಯಲ್ಲಿ ಕಾಂಗ್ರೆಸ್ ನಿಂದ ನಾನು ಪ್ರಬಲ ಟಿಕೆಟ್ ಆಕಾಂಕ್ಷಿ – ಬೇಳೂರು ಗೋಪಾಲಕೃಷ್ಣ

ಬೆಂಗಳೂರು : ಈ ಬಾರಿಯ ಲೋಕಸಭೆ ಚುನಾವಣೆ ಹಿನ್ನೆಲೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಗಲು ನಿರ್ಧರಿಸಿದ್ದೇನೆ ಎಂದು ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ಬಿಜೆಪಿಯವರ ದುರಾಡಳಿತ ಕೊನೆ ಮಾಡಲು ನಾನೇ ಸಮರ್ಥ ಅಭ್ಯರ್ಥಿ.ಹಾಗಾಗಿ, ಕ್ಷೇತ್ರಕ್ಕೆ ನಾನು ಕಾಂಗ್ರೆಸ್‍ನಿಂದ ಪ್ರಬಲ ಅಭ್ಯರ್ಥಿ ಆಗಬಲ್ಲೆ.ನನಗೆ ಟಿಕೆಟ್ ಕೊಟ್ಟರೆ ಗೆಲುವು ಸಾಧಿಸಲಿದ್ದೇನೆ ಎಂದು ತಿಳಿಸಿದರು.

ಬಿಜೆಪಿ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಅವರನ್ನು ಕರೆ ತಂದು ಟಿಕೆಟ್ ಕೊಡುವ ಚರ್ಚೆ ಪಕ್ಷದಲ್ಲಿ ನಡೆದಿಲ್ಲ. ಶಿವಮೊಗ್ಗ ಕ್ಷೇತ್ರಕ್ಕೆ ಬೇರೆಯವರಿಗೆ ಟಿಕೆಟ್ ಕೊಟ್ಟರೆ ಸಮಸ್ಯೆ ಇಲ್ಲ. ಆದರೆ ನಾನು ಪ್ರಬಲ, ಸಮರ್ಥ ಅಭ್ಯರ್ಥಿ ಆಗಬಲ್ಲೆ ಎಂದ ಅವರು, ನಮ್ಮಲ್ಲಿ ಬಣ ರಾಜಕಾರಣ ಇಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಬಂದ ನಂತರ ಕುಮಾರಸ್ವಾಮಿ ಚಿಗುರಿಕೊಂಡಿದ್ದಾರೆ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಕಾಂಗ್ರೆಸ್. ಇಲ್ಲಸಲ್ಲದ ಆರೋಪಗಳನ್ನು ಮಾಡುವುದು ಬಿಡಬೇಕು ಎಂದರು.

About The Author

Leave a Reply

Your email address will not be published. Required fields are marked *

Exit mobile version