ಸಾಗರದಲ್ಲಿ ಈದ್ ಮೆರವಣಿಗೆ ವೇಳೆ ಆಕ್ಷೇಪಾರ್ಹ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಹಿಂಜಾವೇ ಆಗ್ರಹ|sagara

ಈದ್ ಮೆರವಣಿಗೆ ವೇಳೆ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

ಸಾಗರ ಪಟ್ಟಣದಲ್ಲಿ ಸೋಮವಾರ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ರಚೋದನಾಕಾರಿ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಮಂಗಳವಾರ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಡಿವೈಎಸ್‌ಪಿ ಕಚೇರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಕೆ.ಎಚ್.ಸುಧೀಂದ್ರ, ಪವಿತ್ರವಾದ ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲೀಂ ಸಮುದಾಯ ಸೋಮವಾರ ಬೃಹತ್ ಮೆರವಣಿಗೆ ಹಮ್ಮಿಕೊಂಡಿತ್ತು.

ಮೆರವಣಿಗೆಯಲ್ಲಿ ಹಿಂದೂ ಸಮುದಾಯದ ತೇಜೋವಧೆ ಮಾಡುವ ಹಾಗೂ ಬೆದರಿಕೆಯೊಡ್ಡುವ ರೀತಿಯಲ್ಲಿ ವರ್ತನೆ ಮಾಡಿರುವುದನ್ನು ವೇದಿಕೆ ತೀವ್ರವಾಗಿ ಖಂಡಿಸುತ್ತದೆ ಎಂದರು.

ಮಾರಿಕಾಂಬಾ ದೇವಸ್ಥಾನದ ಎದುರು ಮೆರವಣಿಗೆ ಸಾಗುತ್ತಿರುವಾಗ ಮುಸ್ಲೀಂ ಸಮುದಾಯದ ಕೆಲವರು ಹಿಂದೂ ಧರ್ಮವನ್ನು ಟಾರ್ಗೆಟ್ ಮಾಡುವ ರೀತಿಯಲ್ಲಿ ಘೋಷಣೆ ಕೂಗಿದ್ದು ಕಂಡು ಬಂದಿದೆ. ಹಿಂದೂ ಧರ್ಮಿಯರನ್ನು ಬೆದರಿಸುವ ರೀತಿಯಲ್ಲಿ ಮೊಳಗಿಸಿರುವ ಘೋಷಣೆಯಿಂದ ಸಮಾಜದಲ್ಲಿ ಅಶಾಂತಿ ವಾತಾವರಣ ಸೃಷ್ಟಿಸುವ ಅಪಾಯ ಇದೆ. ಯಾರೋ ಕೆಲವರು ಮಾಡುವ ಇಂತಹ ಕುಚೇಷ್ಟೆಗಳಿಂದ ಸಮಾಜದ ಸಾಮರಸ್ಯ ಹಾಳಾಗುವ ಜೊತೆಗೆ ಪರಸ್ಪರ ದ್ವೇಷಾಸೂಯೆ ಮೂಡಲು ಕಾರಣವಾಗುತ್ತಿದೆ ಎಂದರು.

ಈಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಹಿಂದೂ ಬಾಂಧವರ ಮನೆಯನ್ನು ಟಾರ್ಗೆಟ್ ಮಾಡಿ ಕಲ್ಲುತೂರಾಟ ನಡೆಸಿ ಉದ್ವಿಗ್ನ ಸ್ಥಿತಿ ನಿರ್ಮಾಣ ಮಾಡಲಾಗಿತ್ತು. ಇದನ್ನು ಸಹ ವೇದಿಕೆ ತೀವ್ರವಾಗಿ ಖಂಡಿಸುತ್ತಿದ್ದು, ತಪ್ಪಿತಸ್ತರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸುತ್ತದೆ. ಈ ಘಟನೆ ಚರ್ಚೆಯಲ್ಲಿರುವಾಗಲೇ ಸಾಗರ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಹಿಂದೂ ಬಾಂಧವರನ್ನು ಭಯಭೀತಗೊಳಿಸುವ ಘೋಷಣೆ ಕೂಗಲಾಗಿದೆ. ಮುಸ್ಲೀಂ ಸಮುದಾಯದ ಹಿರಿಯರು ಇಂತಹವರನ್ನು ಹದ್ದಬಸ್ತಿನಲ್ಲಿರಿಸಬೇಕು. ಪೊಲೀಸ್ ಇಲಾಖೆ ಸೋಮವಾರ ಮೆರವಣಿಗೆಯಲ್ಲಿ ಅನಗತ್ಯ ಘೋಷಣೆ ಕೂಗಿ ಸಮಾಜದ ಶಾಂತಿ ಕದಡುವ ಪ್ರಯತ್ನ ನಡೆಸಿದವರನ್ನು ವಶಕ್ಕೆ ಪಡೆದು ಸೂಕ್ತ ವಿಚಾರಣೆ ನಡೆಸಬೇಕು. ಇಲ್ಲವಾದಲ್ಲಿ ವೇದಿಕೆ ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕೋಮಲ್ ರಾಘವೇಂದ್ರ, ಐ.ವಿ.ಹೆಗಡೆ, ನಂದೀಶ್ ಸೂರಗುಪ್ಪೆ, ಶ್ರೀಧರ ಸಾಗರ್, ಆಟೋ ಗಣೇಶ್, ಪವನ್ ಮಾಸೂರು, ಸಂತೋಷ್, ಪ್ರತಾಪ್, ಹೇಮಂತ್ ಇನ್ನಿತರರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

3 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

15 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

15 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

17 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

17 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

20 hours ago