ಸಾಗರದ ಗಣಪತಿ ಕೆರೆಯಲ್ಲಿ ಅಪರಿಚಿತ ಶವ ಪತ್ತೆ
ಸಾಗರ : ಅಪರಿಚಿತ ವ್ಯಕ್ತಿಯ ಶವವೊಂದು ಸಾಗರದ ಗಣಪತಿ ಕೆರೆಯಲ್ಲಿ ಪತ್ತೆಯಾಗಿದೆ.
ಅಪರಿಚಿತ ಯುವಕನ ಶವ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದ್ದು ಮೃತ ವ್ಯಕ್ತಿಗೆ ಅಂದಾಜು 25 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಪೋಲೀಸರು ಶವವನ್ನು ಕೆರೆಯಿಂದ ಮೇಲಕ್ಕೆತ್ತಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಯಾವುದೆ ಸುಳಿವು ದೊರಕಿಲ್ಲ
ಯಾರಿಗಾದರೂ ಮೃತ ವ್ಯಕ್ತಿಯ ಸುಳಿವು ದೊರೆತರೆ ಕೂಡಲೆ ಸಮೀಪದ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.