ಸಾಗರ : ಪಟ್ಟಣದ ಹಿರಿಯ ಪತ್ರಕರ್ತರಾದ ಪಿ. ಆತ್ರಿ ತಮ್ಮ ಮುದ್ರಣ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಪಟ್ಟಣದ ಹಳೇ ಮಥುರ ಹೋಟೆಲ್ ನ ಮೇಲ್ಭಾಗದಲ್ಲಿದ್ದ ಕಚೇರಿಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಪಿ.ಅತ್ರಿ ಪತ್ತೆಯಾಗಿದ್ದು ಅವರ ಕುಟುಂಬ ಮತ್ತು ಆಪ್ತ ವಲಯದಲ್ಲಿ ತುಂಬಲಾಗದ ನಷ್ಟ ಉಂಟಾಗಿದೆ. ಇವರ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬರಬೇಕಿದೆ.
ಖ್ಯಾತ ಪತ್ರಕರ್ತ ಹಾಗೂ ಸಮಾಜಮುಖಿಯಾಗಿದ್ದ ಬಿ. ಆತ್ರಿ ನಮ್ಮನಗಲಿರುವುದನ್ನು ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘ (ರಿ ) ಸಾಗರ ಶಾಖೆಯ ಅಧ್ಯಕ್ಷರಾದ ನಾಗೇಶ್, ಕಾರ್ಯದರ್ಶಿಯಾದ ಮಹೇಶ್ ಹೆಗಡೆ ಹಾಗೂ ಸಹ ಪದಾಧಿಕಾರಿಗಳು, ದಿನೇಶ್ ಡಿ, ಸಾಗರ ನಗರ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ, ಗಿರೀಶ್ ಕೋವಿ, ತಾರಾಮೂರ್ತಿ, ಲಾರಿ ಗಂಗಣ್ಣ, ರಾಘವೇಂದ್ರ ಹಾಗೂ ಅಪಾರ ಸ್ನೇಹಿತರು, ಬಂದು ಬಳಗ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್