ಹೆದ್ದಾರಿಯಲ್ಲಿ ಮೂರು ಬೈಕ್ ಗಳ ನಡುವೆ ಡಿಕ್ಕಿ – ಮೂವರಿಗೆ ಗಂಭೀರ ಗಾಯ|accident

ಶಿವಮೊಗ್ಗದ ಆಯನೂರು ಸಮೀಪ ಮೂರು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರಿಗೆ ಗಾಯಗಳಾಗಿವೆ. 

ಇವತ್ತು ಬೆಳಗ್ಗೆ ವೀರಣ್ಣನ ಬೆನವಳ್ಳಿ ಸಮೀಪ ಈ ಘಟನೆ ಸಂಭವಿಸಿದೆ. ಆಯನೂರು ಕಡೆಯಿಂದ ಶಿವಮೊಗ್ಗ ಕಡೆ ಬೈಕ್​ವೊಂದು ಬರುತ್ತಿತ್ತು. ಅದೇ ಸಂದರ್ಭದಲ್ಲಿ ಶಿವಮೊಗ್ಗದ ಕಡೆಯಿಂದ ಎರಡು ಬೈಕ್​ಗಳು ಆಯನೂರು ಕಡೆಗೆ ಹೋಗುತ್ತಿತ್ತು. ಈ ಮಧ್ಯೆ ಒಂದು ಬೈಕ್​ ಸವಾರ ಟರ್ನ್​ ತೆಗೆದುಕೊಂಡಿದ್ದಾನೆ ಎನ್ನಲಾಗಿದ್ದು, ಹಿಂದಿನಿಂದ ಬರುತ್ತಿದ್ದ ಬೈಕ್​ ಮುಂದಿನ ಬೈಕ್​ಗೆ ಡಿಕ್ಕಿ ಹೊಡೆದಿದೆ.

 ಇದೇ ವೇಳೆ ಆಯನೂರು ಕಡೆಯಿಂದ ಬರುತ್ತಿದ್ದ ಬೈಕ್​ ಎದುರು ಆಕ್ಸಿಡೆಂಟ್ ಆದ ಬೈಕ್​ಗಳಿಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್​ನಲ್ಲಿದ್ದ ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ. ಇನ್ನೂ  ಆಯನೂರು ಕಡೆಯಿಂದ ಬರುತ್ತಿದ್ದ ಬೈಕ್ ಸವಾರನಿಗೂ ಗಾಯವಾಗಿದೆ. 

ವಿಷಯ ತಿಳಿಯುತ್ತಲೇ ಸ್ಥಳದಲಿದ್ದವರು ಆ್ಯಂಬುಲೆನ್ಸ್​ಗೆ ಕರೆ ಮಾಡಿ ಮೂವರನ್ನ ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದ್ದಾರೆ. ಸದ್ಯ ಮೂವರು ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದಾರೆ . 

ಆಯನೂರು ಉಪಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಸಂಬಂಧ ಪೊಲೀಸರು ಮಹಜರು ನಡೆಸಿದ್ದಾರೆ.

Leave a Reply

Your email address will not be published. Required fields are marked *