ಹೊಸನಗರ : ಅಂದರ್ ಬಾಹರ್ ಆಡುತ್ತಿದ್ದ 9 ಜನ ಅಂದರ್ – 80 ಸಾವಿರ ರೂ ನಗದು ವಶಕ್ಕೆ

ಅಂದರ್ ಬಾಹರ್ ಆಡುತ್ತಿದ್ದ  9 ಜನ ಅಂದರ್ 80 ಸಾವಿರ ರು ನಗದು ವಶ ಹೆಬೈಲು ದೇವಸ್ಥಾನ ಬಳಿ ನಡೆದ ಘಟನೆ
ಹೊಸನಗರ : ತಾಲೂಕಿನ ಪುರಪ್ಪೆಮನೆ ಬಳಿಯ ಹೆಬ್ಬೆಲು ಸೋಮೇಶ್ವರ ದೇವಸ್ಥಾನದ ಬಳಿಯ ಅರಣ್ಯ ಪ್ರದೇಶದಲ್ಲಿ ಹಣವನ್ನು ಪಣಕಿಟ್ಟು ಅಂದರ್ ಬಾಹರ್ ಇಸ್ಪೀಟ್ ಆಟವನ್ನು ಕಾನೂನು ಬಾಹಿರವಾಗಿ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ 80,500 ರೂ ನಗದು ವಶಪಡಿಸಿಕೊಳ್ಳಲಾಗಿದೆ.

ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ವರ್ತಮಾನ ಪಡೆದ ಹೊಸನಗರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ ವೈ ಕೆ ಹಾಗೂ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿ ಆನಂದಪುರ ಹಾಗೂ ಸಾಗರ ವಾಸಿಗಳಾದ ಸುರೇಶ ಬಿನ್ ಶ್ರೀಧರ ಹಾಲಪ್ಪ ಬಿನ್ ಕೃಷ್ಣಪ್ಪ ಸುಪ್ರೀತಾ ಬಿನ್ ಕೆಂಚಪ್ಪ ಭಾಸ್ಕರ ಬಿನ್ ಮೋಹನ ರಫೀಕ್ ಬಿನ್ ಇಬ್ರಾಹಿಂ ಕಾರ್ತಿಕ ಬಿನ್ ಪರಶುರಾಮ ಪುರಪ್ಪೆ ಮನೆಯ ಉಪೇಂದ್ರ ಬಿನ್ ಸಂಜೀವ ಉದಯ ಬಿನ್ ಸಂತೋಷ ಟಿಲ್ಲರ್ ಮಂಜು ರವರುಗಳ ವಿರುದ್ಧ ಮೊಕ  ದಮೆ ದಾಖಲಿಸಿ ಜೂಜಾಟ ಕ್ಕೆ ತೊಡಗಿಸಿಕೊಂಡಿದ್ದ 80,500 ರೂಗಳನ್ನು 52 ಇಸ್ಪೀಟ್ ಎಲೆ, ಚಾರ್ಜರ್ ಲೈಟ್, ಟಾರ್ಪಲ್ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ಜಿ ಕೆ, ಎ ಎಸ್ ಪಿ ಅನಿಲ್ ಕುಮಾರ್, ಎನ್ ಬೂಮರೆಡ್ಡಿ ತೀರ್ಥಹಳ್ಳಿ ಉಪ ವಿಭಾಗದ ಡಿ ವೈ ಎಸ್ ಪಿ ಗಜಾನನ ಎಂ ಸುತಾರ, ಸರ್ಕಲ್ ಇನ್ಸ್ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ಮಾರ್ಗದರ್ಶನದಲ್ಲಿ ಸಬ್ ಇನ್ಸ್ಪೆಕ್ಟರ್  ಶಿವಾನಂದ ವೈ ಕೆ ರವರು ಸಿಬ್ಬಂದಿಗಳಾದ ಈರೇಶ್ ಗಂಗಪ್ಪ ಬಟ್ಟೋಲಿ ಸುನಿಲ್ ತೀರ್ಥೇಶ್ ಶಶಿಧರ ಸಂತೋಷ್ ನಾಯಕ್ ಗೋಪಾಲಕೃಷ್ಣ ಅವಿನಾಶ್ ಮಹೇಶ ಸಂದೀಪ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

1 hour ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

4 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

16 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

16 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

18 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

18 hours ago