ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ
ಹೊಸನಗರ : ಹಿಂದುಳಿದ ವರ್ಗಗಳ ಇಲಾಖೆ ಕೃಷಿ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಆಯುಷ್ಯ ಇಲಾಖೆ ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಅಡಿಯಲ್ಲಿ ನೀಡುತ್ತಿರುವ ವಿದ್ಯಾರ್ಥಿವೇತನಗಳನ್ನು ರಾಜ್ಯ ಸರ್ಕಾರ ಈಗ ತಡೆಹಿಡಿದಿದ್ದು ಈ ಪ್ರಕ್ರಿಯೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಮಾರಕವಾಗಿದ್ದ ಕಾರಣ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಹೊಸನಗರ ಘಟಕದವರು ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಿಂದ ತಾಲೂಕು ಕಚೇರಿವರೆಗೆ ಜಾಥ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಸರ್ಕಾರದ ಗಮನ ಸೆಳೆಯುವಂತೆ ಕೋರಿದರು.
ರಾಜ್ಯ ಸರ್ಕಾರ 22 23ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನ ನೀಡದೆ ಈ ಹಣವನ್ನು ಬೇರೆ ಯೋಜನೆಗಳಿಗೆ ಬಳಸುತ್ತಿರುವುದು ಖಂಡನಾರ್ಹವಾಗಿದೆ.
ಕುಟುಂಬದ ಆರ್ಥಿಕ ಸಮಸ್ಯೆಗಳಿಂದಾಗಿ ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಶಿಕ್ಷಣವನ್ನು ಮೊಟಕು ಗೊಳಿಸುತ್ತಿದ್ದು ಇದನ್ನು ಕಂಡ ಸರ್ಕಾರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಮೂಲಕ ಶೈಕ್ಷಣಿಕ ಅಭಿವೃದ್ಧಿಗೆ ನಾಂದಿ ಹಾಡಿದ್ದು ಈಗ ವಿದ್ಯಾರ್ಥಿ ವೇತನವನ್ನು ತಡೆಹಿಡಿಯುವ ಮೂಲಕ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಕಾರ್ಯಕರ್ತರ ಅಳಲು ಆಗಿದೆ.
ತಾಲೂಕ ಕಚೇರಿಯವರೆಗೂ ಜಾಥಾ ತೆರಳಿದ ಎಬಿವಿಪಿ ಕಾರ್ಯಕರ್ತರು ತಹಶೀಲ್ದಾರ್ ರಾಕೇಶ್ ಫ್ಯಾನ್ಸಿಸ್ ಬ್ರಿಟ್ಟೋ ರವರಿಗೆ ಮನವಿ ಸಲ್ಲಿಸಿದರು
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಹೊಸನಗರ ಘಟಕದ ನಗರ ಕಾರ್ಯದರ್ಶಿ ಕೆ ಕೆ ಮನೋಜ್, ಕಾರ್ಯಕರ್ತರಾದ ಸುದೀಪ್, ಅಶ್ವಲ್, ಯಶವಂತ್, ದೀಕ್ಷಾ, ಸೀಮಾ, ರಶ್ಮಿತಾ, ಚಿನ್ಮಯ್, ಅರಾಜ್, ನೂತನ್, ನಂದನ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್