ಹೊಸನಗರ ಅಂಚೆ ಕಛೇರಿಯ ಮುಂಭಾಗ ಅಂಚೆ ಇಲಾಖೆಯ ಕೆಲವು ನೌಕರರು ತಮ್ಮ ಬೇಡಿಕೆಗಾಗಿ ಧರಣಿ
ಹೊಸನಗರ: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಅಂಚೆ ಇಲಾಖೆ 169ವರ್ಷ ಸಂಭ್ರಮದಲ್ಲಿದ್ದು ಆದರೆ ನಮ್ಮ ಕೆಲವು ಬೇಡಿಕೆ ಈಡೇರಿಸಲಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಎ.ಐ.ಜಿ.ಓ.ಎಸ್.ಯು ಅಧ್ಯಕ್ಷ ಹೆಚ್.ಜಿ. ವೆಂಕಟೇಶ್‌ರವರ ನೇತೃತ್ವದಲ್ಲಿ ಹೊಸನಗರದ ಅಂಚೆ ಕಚೇರಿಯ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿದರು.
ಈ ಧರಣಿಯಲ್ಲಿ ಮಾತನಾಡಿದ ವೇಂಕಟೇಶ್‌ರವರು ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಮುನಿದು 2016ನೇ ವರ್ಷದಲ್ಲಿ ಕಮಲೇಶ್ ಚಂದ್ರ ಕಮಿಟಿ ಆಯೋಗ ನೇಮಕ ಮಾಡಿ ಗ್ರಾಮೀಣ ಅಂಚೆ ನೌಕರರ ಸ್ಥಿತಿ-ಗತಿ ಬಗ್ಗೆ ವರದಿ ಕೇಳಿತ್ತು ಈ ವರದಿ ಸಲ್ಲಿಸಿ 7ವರ್ಷಗಳ ಕಾಲ ಕಳೆದರೂ ಅದನ್ನು ಸಂಪೂರ್ಣವಾಗಿ ಜಾರಿಗೊಳಿಸದೇ ಕೇಂದ್ರ ಸರ್ಕಾರ ಮತ್ತು ಅಂಚೆ ಇಲಾಖೆ ಆಡಳಿತ ವ್ಯವಸ್ಥೆ ತಾರತಮ್ಯ ನೀತಿಯನ್ನು ಅನುಸರಿಸುತ್ತಿದೆ ನಮ್ಮ ಬೇಡಿಕೆಗಳಾದ 8ಗಂಟೆ ಕಾಲ ಕೆಲಸ ನೀಡುವುದು ಮತ್ತು ಪಿಂಚಣಿ ಸೇರಿದಂತೆ ಎಲ್ಲಾ ಸವಲತ್ತುಗಳನ್ನು ಒದಗಿಸುವುದು, ಸೇವಾ ಹಿರಿತನದ ಆದಾರದ ಮೇಲೆ 12-24-36 ಸೇವೆ ಸಲ್ಲಿಸಿದ ಗ್ರಾಮೇಣ ಅಂಚೆ ನೌಕರರಿಗೆ ವಿಶೇಷ ಇನ್‌ಕ್ರೀಮೆಂಟ್ ನೀಡುವುದು ಗ್ರೋಪ್ ಇನ್ಸ್ರಿರೇನ್ಸ್ ರೂಪಾಯಿ 5ಲಕ್ಷಕ್ಕೆ ಏರಿಸುವುದು. ಜಿಡಿಎಸ್ ಗ್ರಾಚ್ಯುಟಿ ಹಣ ರೂಪಾಯಿ 5ಲಕ್ಷಕ್ಕೆ ಹೆಚ್ಚಿಸುವುದು 180ದಿನಗಳ ರಜೆ ಉಳಿಸಿಕೊಳ್ಳಲು ಅವಕಾಶ ಕಲ್ಪಿಸುವುದು ಜಿ.ಡಿಎಸ್ ಮತ್ತು ಅವರ ಕುಟುಂಬದ ಸದಸ್ಯರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದು ಇತ್ಯಾಧಿ ಬೇಡಿಕೆಗಳಿದ್ದು ತಕ್ಷಣ ಕೇಂದ್ರ ಸರ್ಕಾರ ಸ್ವಂದಿಸಬೇಕೆಂದರು.
ಈ ಧರಣಿಯಲ್ಲಿ ಕಾಯಾಧ್ಯಕ್ಷರಾದ ಉಮೇಶ್, ಸಚಿನ್ ಹೆಚ್.ವಿ, ಲಕ್ಷಿನಾರಾಯಣ, ಮೇಘರಾಜ್, ರ‍್ಯಾವೆ ಈಶ್ವರ, ಸೌಜನ್ಯ, ವಿನುತಾ ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್