Headlines

ಸರ್ಕಾರಿ ಆಸ್ಪತ್ರೆ ಆಂಬುಲೆನ್ಸ್ ಡ್ರೈವರ್ ಆತ್ಮಹತ್ಯೆ|crime news

ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ಆಂಬುಲೆನ್ಸ್ ಡ್ರೈವರ್ ಆತ್ಮಹತ್ಯೆ  ತೀರ್ಥಹಳ್ಳಿ: ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿ ನಗುಮಗು ಆಂಬುಲೆನ್ಸ್ ವಾಹನದ ಸೇವೆಯ ಚಾಲಕ ವೃತ್ತಿ ಮಾಡಿಕೊಂಡು ಬೆಟ್ಟಮಕ್ಕಿಯಲ್ಲಿ ವಾಸವಾಗಿದ್ದ ರಮೇಶ್ ನೇಣುಬಿಗಿದುಕೊಂಡು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಬೆಟ್ಟಮಕ್ಕಿಯ ತನ್ನ ಬಾಡಿಗೆ ಮನೆಯಲ್ಲಿ ಮಂಗಳವಾರ ರಾತ್ರಿ ನೇಣಿಗೆ ಶರಣಾಗಿದ್ದು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ರಮೇಶ್ ಅನೇಕ ಸಂದರ್ಭದಲ್ಲಿ ಜೀವದ ನೂರಾರು ಜನರ ಜೀವ ಉಳಿಸಿದ್ದು ಕೋವಿಡ್ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಮೃತದೇಹವನ್ನು ಅವರ ಸ್ವಂತ ಊರು ಹೊಸನಗರಕ್ಕೆ ತೆಗೆದುಕೊಂಡು…

Read More

ಬಿಜೆಪಿಯ ಮಾಜಿ ಮಂತ್ರಿಯೊಬ್ಬರು 50 ಕೋಟಿ ರೂಪಾಯಿ ಹಿಡಿದುಕೊಂಡು ಕಾಂಗ್ರೆಸ್ ಶಾಸಕರ ಮನೆ ಬಾಗಿಲು ತಟ್ಟುತಿದ್ದಾರೆ – ಆಯನೂರು ಗಂಭೀರ ಆರೋಪ|political news

ಬಿಜೆಪಿಯ ಮಾಜಿ ಮಂತ್ರಿಯೊಬ್ಬರು 50 ಕೋಟಿ ರೂಪಾಯಿ ಹಿಡಿದುಕೊಂಡು ಕಾಂಗ್ರೆಸ್ ಶಾಸಕರ ಮನೆ ಬಾಗಿಲು ತಟ್ಟುತಿದ್ದಾರೆ – ಆಯನೂರು ಗಂಭೀರ ಆರೋಪ ಶಿವಮೊಗ್ಗ : ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಾಡಿದ ಮಾಜಿ ಮಂತ್ರಿ ಇದೀಗ ಕಾಂಗ್ರೆಸ್ ನಾಯಕರ ಮನೆ ಬಾಗಿಲು ತಟ್ಟುತ್ತಿದ್ದಾರೆ. ಕಾಂಗ್ರೆಸ್ ಶಾಸಕರ ಮನೆಬಾಗಿಲಿಗೆ ಹೋಗಿ 50 ಕೋಟಿ ಕೊಡುತ್ತೇವೆ ಎಂದು ಹೇಳಿ ಪಕ್ಷಕ್ಕೆ ಆಹ್ವಾನಿಸುತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಕೆಪಿಸಿಸಿ ಕಛೇರಿಯಲ್ಲಿ ಅವರು ಮಾತನಾಡುತ್ತಾ   ಭ್ರಷ್ಟಾಚಾರಿ ಬಿಜೆಪಿಯವರು ಭ್ರಷ್ಟಾಚಾರದ…

Read More

ರಾಗಿಗುಡ್ಡ ಭೇಟಿಗೆ ತೆರಳುತಿದ್ದ ಪ್ರಮೋದ್ ಮುತಾಲಿಕ್ ರನ್ನು ಮಾಸ್ತಿಕಟ್ಟೆಯಲ್ಲೇ ತಡೆದ ಪೊಲೀಸರು – 30 ದಿನ ಜಿಲ್ಲೆಗೆ ಪ್ರವೇಶಿಸದಂತೆ ನೋಟಿಸ್

ಶಿವಮೊಗ್ಗ : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಶಿವಮೊಗ್ಗ ಭೇಟಿಗಾಗಿ ಮಂಗಳೂರಿನಿಂದ ಬರುತಿದ್ದ ವೇಳೆಯಲ್ಲಿ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ತಡೆದು ಪ್ರತ್ಯೇಕ ಕಾರಿನಲ್ಲಿ ದಾವಣಗೆರೆಗೆ ಕಳುಹಿಸಿಕೊಟ್ಟಿದ್ದಾರೆ. ಹೌದು, ಪ್ರಮೋದ್ ಮುತಾಲಿಕ್ ಶಿವಮೊಗ್ಗ ಭೇಟಿಗೆ 30 ದಿನ ನಿರ್ಬಂಧ ವಿಧಿಸಲಾಗಿದೆ.ಶಿವಮೊಗ್ಗ ಜಿಲ್ಲೆಗೆ ಪ್ರವೇಶ ಮಾಡದಂತೆ ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಇಲಾಖೆ ಕೋರಿಕೆ ಮೇರೆಗೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಪ್ರಮೋದ್ ಮುತಾಲಿಕ್ ಮಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಹೊಸನಗರ ತಾಲೂಕಿನ…

Read More

C M ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಪಕ್ಷದಿಂದ ಹೊರನಡೆಯಲಿ – ಅರ್ ಎ ಚಾಬುಸಾಬ್|JDS

C M ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಪಕ್ಷದಿಂದ ಹೊರನಡೆಯಲಿ – ಅರ್ ಎ ಚಾಬುಸಾಬ್ ರಿಪ್ಪನ್‌ಪೇಟೆ : ಸಿ ಎಂ ಇಬ್ರಾಹಿಂ ರವರು ಗೌರವಯುತವಾಗಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿ ಹೋಗಲಿ ಅದನ್ನು ಹೊರತುಪಡಿಸಿ ಯಾರದೋ ಮನೆಯಲ್ಲಿ ಯಜಮಾನಿಕೆ ನಡೆಸಲು ಬಂದರೆ ಸಹಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ಎ ಚಾಬುಸಾಬ್ ಹೇಳಿದರು. ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಸಿ…

Read More

ತುಂಗಾ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ತೀರ್ಥಹಳ್ಳಿಯ ನಾಲ್ವರಿಗೆ ನೋಟಿಸ್|NIA

ತುಂಗಾ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ತೀರ್ಥಹಳ್ಳಿಯ ನಾಲ್ವರಿಗೆ ನೋಟಿಸ್ ಶಿವಮೊಗ್ಗದ ತುಂಗಾ ತೀರದಲ್ಲಿ ಟ್ರಯಲ್ ಬ್ಲ್ಯಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಾಲ್ವರಿಗೆ ಎನ್​ಐಎ (NIA) ನೋಟಿಸ್ ಜಾರಿ ಮಾಡಿದೆ. ತೀರ್ಥಹಳ್ಳಿ ಮೂಲದ ಶಂಸುದ್ದೀನ್, ರಿಜ್ವಾನ್, ನಜೀಬ್ ವುಲ್ಲಾ ಹಾಗೂ ತಮೀಮ್​ಗೆ ವಿಚಾರಣೆಗೆ ಹಾಜರಾಗುವಂತೆ ಎನ್​​ಐಎ ನೋಟಿಸ್ ನೀಡಿದೆ. ಅಕ್ಟೋಬರ್ 19ರ ಮಧ್ಯಾಹ್ನದೊಳಗೆ ಬೆಂಗಳೂರಿನ‌ ಎನ್​ಐಎ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ಸೂಚನೆ ನೀಡಲಾಗಿದೆ. 2022ರ ಆ.26ರಂದು ಶಿವಮೊಗ್ಗ ತುಂಗಾ ನದಿ ತೀರದಲ್ಲಿ…

Read More

ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿ ವಶಕ್ಕೆ..!!|sand

ಹೊಸನಗರ : ಹಿನ್ನೀರು ಪ್ರದೇಶದಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ವಶಪಡೆದು ಎರಡು ಪ್ರತ್ಯೇಕ ಪ್ರಕರಣಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಖಲಿಸಿದ್ದಾರೆ. ಪರವಾನಿಗೆ ಇಲ್ಲದೆ ಟಿಪ್ಪರ್ ಲಾರಿಗಳಲ್ಲಿ ಮರಳು ಸಾಗಾಣಿಕೆ ಮಾಡುತ್ತಿದ್ದ ವೇಳೆ ದಾಳಿ ನಡೆಸಿ ಆರೋಪಿಗಳ ಸಹಿತ ಮರಳು ತುಂಬಿದ ಟಿಪ್ಪರ್‌ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಸೊನಲೆ ಗ್ರಾಮದ ಕಿರಣ್ ಹಾಗೂ ಬಟ್ಟೆಮಲ್ಲಪ್ಪದ ದೇವರಾಜ ಎಂಬುವವರು ಕರಿನಗೊಳ್ಳಿ ಹಾಗೂ ಮುತ್ತಲ ಗ್ರಾಮಗಳಲ್ಲಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದರು….

Read More

ಕೋಡೂರು – ಬಸ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು|accident

ಕೋಡೂರು – ಬಸ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು ಚಲಿಸುತ್ತಿದ್ದ ಖಾಸಗಿ ಬಸ್‌ನಿಂದ ಮಗುವಿನೊಂದಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತರಾದರು. ಮೃತ ವ್ಯಕ್ತಿ ಕುಮಾರ್ ಆರ್ (62) ಎಂದು ಗುರುತಿಸಲಾಗಿದೆ. ಮೂಲತಃ ಮಡಿಕೇರಿಯವನಾದ ಈತ ಕಳೆದೊಂದು ವರ್ಷದಿಂದ ಚಿಕ್ಕಜೇನಿ ತಮ್ಮ ಪುತ್ರಿಯ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಕಳೆದ ಮಂಗಳವಾರ ರಿಪ್ಪನ್ ಪೇಟೆ ವ್ಯಾಪ್ತಿಯ ಕೋಡೂರು ಗ್ರಾಮ ಪಂಚಾಯತಿಯ ಶಾಂತಪುರದಲ್ಲಿ ಹೊಸನಗರದಿಂದ ಶಿವಮೊಗ್ಗ ಕಡೆ ಹೊರಟಿದ್ದ…

Read More

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ ಸಂಘಟನೆ ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ|rpet

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ  ಸಂಘಟನೆ  ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಯಾವುದೇ ಒಂದು ರಾಜಕೀಯ ಪಕ್ಷಗಳು ಸಂಘಟನೆ  ಆಗಬೇಕಾದರೆ  ಆ ಪಕ್ಷದ ಕಾರ್ಯಕರ್ತರ ಪರಿಶ್ರಮ, ನಿಷ್ಠೆ ಮತ್ತು ಪ್ರಾಮಾಣಿಕತನ ಮೂಲ ಕಾರಣವಾಗುತ್ತದೆ ಎಂದು  ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡ ಆರ್ ಎಂ ಮಂಜುನಾಥ್ ಗೌಡ ಹೇಳಿದರು.  ಪಟ್ಟಣದ ಸಾಗರ ರಸ್ತೆಯಲ್ಲಿನ ಶ್ರೀರಾಮ ಮಂದಿರದಲ್ಲಿ ಆಯೋಜಿಸಲಾಗಿದ್ದ  ರಿಪ್ಪ ನ್ ಪೇಟೆ ಕಾಂಗ್ರೆಸ್ ಘಟಕದ ನೂತನ…

Read More

ಪದವೀಧರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ.? ದಾಖಲೆಗಳೇನು? ಇಲ್ಲಿದೆ ಮಾಹಿತಿ|election

ರಿಪ್ಪನ್‌ಪೇಟೆ : ಕೆಲವೇ ದಿನಗಳಲ್ಲಿ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗೋ ಸಾಧ್ಯತೆ ಇದೆ. ಇದಕ್ಕೂ ಮುನ್ನಾ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ಪಟ್ಟಿ ತಯಾರಿಕೆ ಕೂಡ ಆರಂಭಗೊಂಡಿದೆ.  ಮುಂಬರುವ ವಿಧಾನ ಪರಿಷತ್ ಚುನಾವಣೆಗಾಗಿ ಮತದಾರರ ಪಟ್ಟಿ ತಯಾರಿಕೆಗೆ ಸಿದ್ಧತೆಯನ್ನು ಚುನಾವಣಾ ಆಯೋಗ ಆರಂಭಿಸಿದೆ. ಇಂತಹ ಮತದಾರರ ಪಟ್ಟಿಗೆ ಪದವೀಧರರಾದಂತ ನೀವು ಅರ್ಜಿಯನ್ನು ಸಲ್ಲಿಸೋದು ಹೇಗೆ.? ಅರ್ಹತೆಗಳು ಏನು ಅನ್ನೋ ಬಗ್ಗೆ ಕೂಡ ಮಾಹಿತಿ ನೀಡಿದೆ. ಈ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ಬಳಗದ ವತಿಯಿಂದ…

Read More

ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ|kenchanal

ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ ಕಾಡಾನೆಗಳು ಪ್ರತ್ಯಕ್ಷವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗಾಳಿಬೈಲ್ ಗ್ರಾಮದಲ್ಲಿ ನಡೆದಿದೆ. ಗಾಳಿಬೈಲು ಗ್ರಾಮದ ರೈತರೊಬ್ಬರ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು,ಬಾಳೆ ಮತ್ತು ಅಡಿಕೆ ಗಿಡಗಳನ್ನು ನಾಶಗೊಳಿಸಿದ್ದು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ಇತ್ತೀಚೆಗೆ ಚಿರತೆ ಹಾವಳಿಯಿಂದ ಭಯಭೀತರಾಗಿದ್ದ ಗ್ರಾಮಸ್ಥರಿಗೆ ಈಗ ದಿಢೀರ್ ಪ್ರತ್ಯಕ್ಷವಾದ ಕಾಡಾನೆಯ ಭೀತಿಯೂ ಆವರಿಸಿದೆ. ಕಳೆದ 2-3 ದಿನಗಳ ಹಿಂದೆ ಆಲುವಳ್ಳಿ ಗ್ರಾಮದ ಬಳಿ ಕಾಣಿಸಿಕೊಂಡಿದ್ದ ಆನೆಗಳು ನಿನ್ನೆಯ…

Read More