ಹೆದ್ದಾರಿಯಲ್ಲಿ ಮೂರು ಬೈಕ್ ಗಳ ನಡುವೆ ಡಿಕ್ಕಿ – ಮೂವರಿಗೆ ಗಂಭೀರ ಗಾಯ|accident
ಶಿವಮೊಗ್ಗದ ಆಯನೂರು ಸಮೀಪ ಮೂರು ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರಿಗೆ ಗಾಯಗಳಾಗಿವೆ. ಇವತ್ತು ಬೆಳಗ್ಗೆ ವೀರಣ್ಣನ ಬೆನವಳ್ಳಿ ಸಮೀಪ ಈ ಘಟನೆ ಸಂಭವಿಸಿದೆ. ಆಯನೂರು ಕಡೆಯಿಂದ ಶಿವಮೊಗ್ಗ ಕಡೆ ಬೈಕ್ವೊಂದು ಬರುತ್ತಿತ್ತು. ಅದೇ ಸಂದರ್ಭದಲ್ಲಿ ಶಿವಮೊಗ್ಗದ ಕಡೆಯಿಂದ ಎರಡು ಬೈಕ್ಗಳು ಆಯನೂರು ಕಡೆಗೆ ಹೋಗುತ್ತಿತ್ತು. ಈ ಮಧ್ಯೆ ಒಂದು ಬೈಕ್ ಸವಾರ ಟರ್ನ್ ತೆಗೆದುಕೊಂಡಿದ್ದಾನೆ ಎನ್ನಲಾಗಿದ್ದು, ಹಿಂದಿನಿಂದ ಬರುತ್ತಿದ್ದ ಬೈಕ್ ಮುಂದಿನ ಬೈಕ್ಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಆಯನೂರು…