ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲುವಳ್ಳಿ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸುರಕ್ಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಗ್ರಾಮೀಣ ಪ್ರದೇಶವಾದ ಆಲುವಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯ ಈ ಸಾಧನೆಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.ಆಲುವಳ್ಳಿ ನಿವಾಸಿ ಶಶಿ ಹಾಗೂ ವನಜಾಕ್ಷಿ ದಂಪತಿಗಳ ಪುತ್ರಿಯಾದ ಸುರಕ್ಷಾ ಜಿಲ್ಲೆಯ ಬಲಿಷ್ಠ ಶಾಲೆಗಳ ಕ್ರೀಡಾಪಟುಗಳ ಎದುರು ತನ್ನ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಅದ್ವಿತೀಯ ಸಾಧನೆಗೈದ ಜೀವಿತಾ ರವರಿಗೆ ಹೊಸನಗರ ಕ್ಷೇತ್ರದ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ,ಕೆಂಚನಾಲ ಗ್ರಾಮಾಡಳಿತ, ಎಸ್ ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ,ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಸಲ್ಲಿಸಿದ್ದಾರೆ.