ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ
ಶಿವಮೊಗ್ಗ : ಯಲವಟ್ಟಿ ಗ್ರಾಮದಲ್ಲಿ ಮರವೊಂದನ್ನು ಕಟಾವು ಮಾಡುವ ವೇಳೆ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದ ಕಾರಣ ಬೈಕ್ ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಓರ್ವ ಸಾವು ಕಂಡಿದ್ದಾರೆ.
ಯಲವಟ್ಟಿಯ ಖಾಸಗಿ ತೋಟದಲ್ಲಿದ್ದ ಮರ ಕಡಿಯುವ ವೇಳೆ ಮುಂಜಾಗೃತ ಕ್ರಮ ಕೈಗೊಳ್ಳದ ಪರಿಣಾಮ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದಿದೆ. ಬೈಕ್ ನಲ್ಲಿದ್ದ ಓರ್ವ ಮೃತಪಟ್ಟು ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.
ತಕ್ಷಣ ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೂವರಲ್ಲಿ ಓರ್ವ ಸಾವು ಕಂಡಿದ್ದಾನೆ.
ಮೃತ ವ್ಯಕ್ತಿಯನ್ನು ರಾಜೇಶ್ ಎಂದು ಗುರುತಿಸಲಾಗಿದೆ.
ಉಳಿದ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.