ರಿಪ್ಪನ್‌ಪೇಟೆ : ಉತ್ತಮ ಶಿಕ್ಷಕಿಯರಿಗೆ ಗ್ರಾಪಂ ವತಿಯಿಂದ ಸನ್ಮಾನ|honour

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಪಂ ಸಭಾಂಗಣದಲ್ಲಿ ತಾಲೂಕ್ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದ ಇಬ್ಬರು ಶಿಕ್ಷಕಿಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕೆಂಚನಾಲ ಗ್ರಾಮ ಪಂಚಾಯತ್ ನಲ್ಲಿ ಸೋಮವಾರ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ತಾಲೂಕ್ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಗ್ರಾಪಂ ವ್ಯಾಪ್ತಿಯ ಚಂದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಾಜುನ್ ಬಿ ಹಾಗೂ ಕೆಂಚನಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಭಾಗ್ಯಲಕ್ಷ್ಮಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ , ಉಪಾಧ್ಯಕ್ಷೆ ರಮ್ಯಾ ಶಶಿಕುಮಾರ್ ,ಸದಸ್ಯರಾದ ಮಹಮ್ಮದ್ ಷರೀಫ್ ,ಕೃಷ್ಣೋಜಿ ರಾವ್ , ಪರಮೇಶ್ವರಪ್ಪ ,ಪುಟ್ಟಮ್ಮ ,ಹೂವಮ್ಮ , ಗೌರಮ್ಮ , ಲಕ್ಷ್ಮಮ್ಮ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಕುಮಾರ್ ,ಚಂದಳ್ಳಿ ಶಾಲೆಯ ಮುಖ್ಯ ಶಿಕ್ಷಕ ಜಗದೀಶ್ ಕಾಗಿನಲೆ,ಗ್ರಾಪಂ ಸಿಬ್ಬಂದಿ ವರ್ಗ ,ಆಶಾ ಕಾರ್ಯಕರ್ತೆಯರು ಹಾಗೂ ಇನ್ನಿತರರಿದ್ದರು.

Leave a Reply

Your email address will not be published. Required fields are marked *