ಸಾಗರದ ಗಣಪತಿ ಕೆರೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದ ಗಣಪತಿ ಕೆರೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ.
ನಿನ್ನೆ ರಾತ್ರಿ ಸಾಗರ ಪೇಟೆಯ ಗಣಪತಿ ಕೆರೆಯ ಬಳಿಯಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಕೋ ಕಾರೊಂದು ಪಲ್ಟಿಯಾದ ಬಗ್ಗೆ ವರದಿಯಾಗಿದೆ. ಗಣಪತಿ ಕೆರೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಅದೃಷ್ಟಕ್ಕೆ ಯಾವುದೇ ಅಪಾಯ ಸಂಭವಿಸಿಲ್ಲ. ಇನ್ನೂ ಕಾರಿನಲ್ಲಿದ್ದವರಿಗೆ ಆದ ಗಾಯಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಪಲ್ಟಿಯಾದ ರಭಸಕ್ಕೆ ಕಾರು ಜಖಂಗೊಂಡಿದೆ. ಅಲ್ಲದೆ ಘಟನೆಯಲ್ಲಿ ಕೆರೆಯ ಪಕ್ಕದಲ್ಲಿಯೇ ಕಾರು ಪಲ್ಟಿಯಾಗಿ ನಿಂತಿದೆ.
ನಿನ್ನೆ ಸಂಜೆ ಸುಮಾರಿಗೆ ನಿಂತಿದ್ದ ಕೆಎಸ್ಆರ್ಟಿಸಿ ಬಸ್ಗೆ ಬೈಕ್ವೊಂದು ಗುದ್ದಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಈ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.