ಆನಂದಪುರದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಪ್ರಾಪ್ತನೊಂದಿಗೆ ಯುವತಿಯ ಅಶ್ಲೀಲ ನೃತ್ಯ – ವೀಡಿಯೋ ವೈರಲ್ | Viral video

ಆನಂದಪುರದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಪ್ರಾಪ್ತನೊಂದಿಗೆ ಯುವತಿಯ ಅಶ್ಲೀಲ ನೃತ್ಯ – ವೀಡಿಯೋ ವೈರಲ್ | Viral video
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಡೆದಿದೆ ಎನ್ನಲಾದ ಅಶ್ಲೀಲ ನೃತ್ಯದ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ.

ಕರ್ನಾಟಕ ರತ್ನ ಡಾ ಪುನೀತ್ ರಾಜ್‍ಕುಮಾರ್ ಹೆಸರಿನ ಸಂಘಟನೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ದಲ್ಲಿ ಅರೆಬರೆ ಬಟ್ಟೆ ತೊಟ್ಟ ಯುವತಿಯನ್ನು ಕುಣಿಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.ಅದರಲ್ಲೂ ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಅಶ್ಲೀಲ ಭಂಗಿಗಳಲ್ಲಿ ಯುವತಿ ಕುಣಿದಿದ್ದಾಳೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ.


ಮೂರು ನಿಮಿಷದ ಮೊಬೈಲ್ ದೃಶ್ಯಾವಳಿಯಲ್ಲಿ ಯುವತಿಯು ಅಪ್ರಾಪ್ತ ಬಾಲಕನನ್ನು ಒಬ್ಬ ಪುರುಷನ ರೀತಿಯಲ್ಲಿ ಬಳಸಿಕೊಂಡು ಆತನ ಜೊತೆಗೆ ಸೆಕ್ಸ್​​ ಓರಿಯೆಂಟೆಡ್​ ಸ್ಟೆಪ್​ಗಳನ್ನು ಹಾಕುತ್ತಿದ್ದಾಳೆ. ಇನ್ನೂ ದೃಶ್ಯದ ಹಿಂದೆ ಕಾಣುವ ಬ್ಯಾನರ್​ ನಲ್ಲಿ ಶಿವಮೊಗ್ಗ ಜಿಲ್ಲೆ ಎಂದು ಸ್ಪಷ್ಟವಾಗಿ ಬರೆಯಲಾಗಿದೆ. ಭದ್ರಾವತಿ  ಮೂಲದ ಆರ್ಕೆಸ್ಟ್ರಾ ಎಂಬ ಬರಹ ಕೂಡ ಕಾಣುತ್ತಿದೆ.

ಮೂಲಗಳ ಪ್ರಕಾರ ಆನಂದಪುರದ ಕನ್ನಡ ಸಂಘಟನೆಯೊಂದರ ಕಾರ್ಯಕ್ರಮ ಇದಾಗಿತ್ತು ಎನ್ನಲಾಗಿದ್ದು ಸದ್ಯ ವಿಡಿಯೋ ವೈರಲ್ ಆಗುತ್ತಿದ್ದು, ಬಾಲಕನೊಬ್ಬನನ್ನ ಅಸಭ್ಯ ರೀತಿಯಲ್ಲಿ ಕುಣಿಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಪೊಲೀಸ್​ ಇಲಾಖೆಗೆ ಮಾಹಿತಿ ಇದೆಯಾ ಅಥವಾ ಇದುವರೆಗೂ ಇಲ್ಲವಾ ಎಂಬುದು ಇನ್ನಷ್ಟೆ ಗೊತ್ತಾಗಬೇಕಿದೆ.

ಮಕ್ಕಳನ್ನು ಅಶ್ಲೀಲತೆಗೆ ಸಂಬಂಧಿಸಿದ ಯಾವುದೆ ವಿಚಾರದಲ್ಲಿಯು ಬಳಸಿಕೊಳ್ಳುವುದು ಅಪರಾಧವಾಗುತ್ತದೆ. ಪೋಕ್ಸೋ ಕಾಯಿದೆಯಡಿಯಲ್ಲಿ ಇಂತಹ ಕೃತ್ಯಗಳು ಶಿಕ್ಷಾರ್ಹ. ಸದ್ಯ ವೈರಲ್​ ಆಗುತ್ತಿರುವ ವಿಡಿಯೋದಲ್ಲಿ ಅಪ್ರಾಪ್ತನನ್ನು ಯುವತಿ ಅಸಭ್ಯ ಕುಣಿತಕ್ಕಾಗಿ ಬಳಸಿಕೊಂಡಿರುವುದು ಕಾಣುತ್ತಿದೆ. ಈ ಬಗ್ಗೆ ಮಕ್ಕಳ ಕಲ್ಯಾಣ ಇಲಾಖೆಯು ಸಹ ಗಮನಹರಿಸಬೇಕಿದೆ.

ಒಟ್ಟಾರೆಯಾಗಿ ಆನಂದಪುರವೆಂದರೆ ಕನ್ನಡಪರ ಹೋರಾಟಗಾರರಾದ ಹಾ ಮಾ ಬಾಷಾ ,ಅರುಣ್ ಪ್ರಸಾದ್ , ಸುರೇಶಣ್ಣ, ನಾಗಾರಾಜ್, ಬಿ ಡಿ ರವಿಕುಮಾರ್ ಹಾಗೂ ಇನ್ನಿತರ ಮುಖಂಡರ ನೆನಪಾಗುತ್ತದೆ ಅಂತಹ ಮಹಾನ್ ನೈಜ ಕನ್ನಡಪರ ಹೋರಾಟಗಾರರ ನೆಲದಲ್ಲಿ ಇದೆಂತಹ ಅಸಭ್ಯ ನೃತ್ಯ… ಮಲೆನಾಡಿನಲ್ಲಿ ಇಂತಹ ನಂಗನಾಚ್ ನೃತ್ಯವನ್ನು ಹಿಂದೆಯೂ ಸಹಿಸಿಲ್ಲ ಮುಂದೆಯೂ ಸಹಿಸುವುದಿಲ್ಲಾ…

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

7 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

8 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

12 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

16 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

19 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago