Headlines

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ|rpet

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ
ರಿಪ್ಪನ್‌ಪೇಟೆ : ಕನ್ನಡ ಭಾಷೆ ಉಳಿಸಿ ಬೆಳಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಸಿದ್ದರಾಗಬೇಕು, ಕಲೆ ಸಾಹಿತ್ಯದ ತವರೂರು ಶಿವಮೊಗ್ಗ ಜಿಲ್ಲೆಯಾಗಿದ್ದು ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಅಭಿಮಾನಿ ಬಳಗದ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ನಾಡು ನುಡಿ ಸಂರಕ್ಷಣೆ ವಿಷಯ ಬಂದಾಗ ನಾವು ಸಂಘಟನೆಯಾಗುವುದರೊಂದಿಗೆ ಹೋರಾಟ ನಡೆಸಬೇಕಾದ ಅನಿವಾರ್ಯತೆ ಇದೆ ,ಕನ್ನಡ ನೆಲ-ಜಲ ಗಡಿ ಭಾಷೆಯ ವಿಷಯ ಬಂದಾಗ ರಾಜಕೀಯ ಪಕ್ಷ ದೂರವಿಟ್ಟು ಧ್ವನಿ ಎತ್ತುವ ಮೂಲಕ ಸಂಘಟನಾತ್ಮಕ ಹೋರಾಟಕ್ಕೆ ಸದಾ ಸಿದ್ದನಾಗಿದ್ದೇನೆಂದು ಹೇಳಿದರು.


ಕಾರ್ಯಕ್ರಮವುನ್ನುದ್ದೇಶಿಸಿ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ,ಬಿಜೆಪಿ ಮುಖಂಡ ಕೆ ಎಸ್ ಪ್ರಶಾಂತ್ ಹಾಗೂ ಸಂಘದ ಗೌರವಾಧ್ಯಕ್ಷ ಆನಂದ್ ಮೆಣಸೆ ಮಾತನಾಡಿದರು. ಜಿ.ಆರ್.ಗೋಪಾಲಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪಿಎಸ್‌ಐ ಪ್ರವೀಣ್ ಎಸ್.ಪಿ.ಬಹುಮಾನ ವಿತರಿಸಿದರು.


ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್‌ರಾಜ್ ಅಭಿಮಾನಿ ಬಳಗದ ಅಧ್ಯಕ್ಷ ಉಲ್ಲಾಸ್ ತೆಂಕೋಲ್ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂಧರ್ಭದಲ್ಲಿ ಪುನೀತ್ ರಾಜ್‍ಕುಮಾರ್ ಭಾವಚಿತ್ರಕ್ಕೆ ಅತಿಥಿ ಗಣ್ಯರು ಹಾಗೂ ಕನ್ನಡಾಭಿಮಾನಿಗಳು ಪುಷ್ಪಾರ್ಚನೆ ಹಾಗೂ ಮೇಣದ ಬತ್ತಿ, ಮೊಬೈಲ್ ಟಾರ್ಚ್ ಬೆಳಕಿನ ಮೂಲಕ ಮೂಲಕ ನುಡಿನಮನ ಸಲ್ಲಿಸಿದರು.


ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ, ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ, ಗ್ರಾಮ ಪಂಚಾಯ್ತಿ ಸದಸ್ಯ ಡಿ.ಈ.ಮಧುಸೂದನ್, ಎನ್.ಚಂದ್ರೇಶ್, ಜೆಡಿಎಸ್ ಜಿಲ್ಲಾ ಮುಖಂಡ ಜಿ.ಎಸ್.ವರದರಾಜ್, ಅರಸಾಳು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಉಮಾಕರ, ಸಂತೋಷ್ ಆಶ್ರೀತಾ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.


ಪ್ರಣತಿ ಪ್ರಾರ್ಥಿಸಿದರು. ಹಸನಬ್ಬ ಸ್ವಾಗತಿಸಿದರು. ಕಾವ್ಯ ಕಾರ್ಯಕ್ರಮ ನಿರೂಪಿಸಿದರು, ಶ್ರೀಧರ್  ವಂದಿಸಿದರು.

ಸಭಾ ಕಾರ್ಯಕ್ರಮದ ನಂತರ ಝೀ ಕನ್ನಡ ವಾಹಿನಿಯ ಸರಿಗಮಪ ಖ್ಯಾತಿಯ ಕು|| ಸಾದ್ವಿನಿ ಕೊಪ್ಪ, ಪ್ರಖ್ಯಾತ ಗಾಯನ ಕಲಾವಿದ ಮೆಹಬೂಬ್‌ಸಾಬ್ ಮತ್ತು ಅಶ್ವಿನ್‌ ಶರ್ಮ, ಎದೆ ತುಂಬಿಹಾಡುವೆನು ಖ್ಯಾತಿಯ ಸಾನ್ವಿ ಜಿ.ಭಟ್ ಇವರಿಂದ ಗಾಯನ ಕಾರ್ಯಕ್ರಮ ಜರುಗಿತು.

Leave a Reply

Your email address will not be published. Required fields are marked *