ಕಾರು ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸಾವು!
ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169A ತೀರ್ಥಹಳ್ಳಿ – ಆಗುಂಬೆಯ ಮಾರ್ಗದ ಬಾಳೆಬೈಲು ಮಲ್ನಾಡ್ ಕ್ಲಬ್ ಸಮೀಪದ ರಾಕ್ ವಿವ್ಯೂ ಹೊಟೇಲ್ ಎದುರು ಬುಲೆಟ್ ಬೈಕ್ ಮತ್ತು ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.
ಬೈಕ್ ಸವಾರ ರಮೇಶ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಆಗುಂಬೆ ಫಾರೆಸ್ಟ್ ಗೇಟ್ ವಾಚರ್ ಆಗಿರುವ ರಮೇಶ್ ರವರಿಗೆ ಗಂಭೀರ ಗಾಯವಾಗಿದ್ದ ಕಾರಣ ತೀರ್ಥಹಳ್ಳಿ ಜೆ ಸಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೊಂಡೊಯ್ಯುಲಾಗಿತ್ತು.
ಆದರೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಡಿದ್ದ ರಮೇಶ್ ಮಣಿಪಾಲ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.