ಜೀವ ಬೆದರಿಕೆ ಪ್ರಕರಣ – ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿದಂತೆ 43 ಜನರ ವಿರುದ್ದ ಪ್ರಕರಣ ದಾಖಲು|FIR

ಜೀವ ಬೆದರಿಕೆ ಪ್ರಕರಣ – ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿದಂತೆ 43 ಜನರ ವಿರುದ್ದ ಪ್ರಕರಣ ದಾಖಲು

ಸಾಗರ – ಇಲ್ಲಿನ ಜನತಾ ಶಾಲೆಯ ಎದುರಿನ ನಿವೇಶನಕ್ಕೆ ಸಂಬಧಿಸಿದಂತೆ ಜುಲೈ 10 ರಂದು ನಡೆದ ಪ್ರತಿಭಟನೆಯ ಹಿನ್ನಲೆಯಲ್ಲಿ ಮಾಜಿ ಸಚಿವರಾದ ಹರತಾಳು ಹಾಲಪ್ಪ ಸೇರಿದಂತೆ 43 ಜನರ ವಿರುದ್ದ ಕೋರ್ಟ್ ಆದೇಶದಂತೆ ಸಾಗರದ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜುಲೈ 10 ರಂದು ನಡೆದ ಪ್ರತಿಭಟನೆ ಸಂಧರ್ಭದಲ್ಲಿ ವಿಜಯ್ ಕುಮಾರ್ ಪಾಟೀಲ್ ರವರು ಪ್ರತಿಭಟನಕಾರರಿಗೆ ಮಾನ್ಯ ನ್ಯಾಯಾಲಯದ ಹಂಗಾಮಿ ಪ್ರತಿಬಂದಕ ಆದೇಶ ಇದೆ ಎಂದು ತೋರಿಸಿದರೂ ಸಹ ಅತಿಕ್ರಮಣ ಪ್ರವೇಶ ಮಾಡಿ ದೂರುದಾರ ಮತ್ತು ಅವರ ಕಡೆಯವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಪ್ರತಿಭಟನೆ ಮಾಡಿ ದೂರುದಾರನನ್ನು ಸ್ವತ್ತಿನಿಂದ ಹೊರಹಾಕಬೇಕೆಂಬ ಉದ್ದೇಶದಿಂದ ಪ್ರತಿಭಟನಕಾರರು ಗುಂಪುಕಟ್ಟಿಕೊಂಡು ಬಂದು  ಜಾಗದಲ್ಲಿ ಅಶಾಂತಿಯನ್ನು ಉಂಟುಮಾಡಿ ಈ ದಿನ ಉಳಿದುಕೊಂಡಿದಿಯ ಇನ್ನೊಂದು ದಿನ ಸಿಕ್ಕರೆ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದು, 5ನೇ ಆರೋಪಿ ನಾನು ಮಾಜಿ ಎಂ.ಎಲ್.ಎ ಎಷ್ಟು ಕೇಸು ನೋಡಿಲ್ಲಾ ಎಂದು ದೂರುದಾರನಿಗೆ ಜೀವ ಬೆದರಿಕೆ ಹಾಕಿ ಮಾದ್ಯಮದ ಎದುರು ಸುಳ್ಳು ಭಾಷಣ ಮಾಡಿರುತ್ತಾರೆ ಎಂದು ದೂರು ಸಲ್ಲಿಸಿದ್ದಾರೆ.


ಈ ಪ್ರಕರಣದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ,ಶಿವಮೊಗ್ಗ ಜಿಲ್ಲಾಧ್ಯಕ್ಷ ಟಿ ಡಿ‌ ಮೇಘರಾಜ್ , ನಗರಸಭೆ ಮಾಜಿ ಅಧ್ಯಕ್ಷೆ ಮಧುರ ಶಿವಾನಂದ್ , ಗಣೇಶ್ ಪ್ರಸಾದ್ ,ಕುಗ್ವೆ ಅರುಣ್ ,ರವಿ ಬಸರಾಣಿ‌ ಸೇರಿದಂತೆ ಒಟ್ಟು 43 ಜನರ ವಿರುದ್ದ ನ್ಯಾಯಲಯದ ಆದೇಶದಂತೆ ಪ್ರಕರಣ ದಾಖಲಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

4 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

5 hours ago

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies…

5 hours ago

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

22 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

1 day ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

1 day ago