ಪಟಾಕಿ ಸಿಡಿದು ಯುವಕ ಸಾವು – ಮೂವರು ಆಸ್ಪತ್ರೆಗೆ ದಾಖಲು|A fireworks disaster

ಪಟಾಕಿ ಸಿಡಿದು ಯುವಕ ಸಾವು – ಮೂವರು ಆಸ್ಪತ್ರೆಗೆ ದಾಖಲು|
Fire work disaster | ಪಟಾಕಿ ಸಿಡಿದು ಓರ್ವ ಯುವಕನೊಬ್ಬ ಸಾವನ್ನಪ್ಪಿ, ಮೂವರು ಮಕ್ಕಳಿಗೆ ಗಂಭೀರ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಮತ್ತು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವ ಘಟನೆ ನಡೆದಿದೆ.

ಮಂಗಳವಾರ ರಾತ್ರಿ ಚಿಕ್ಕಮಗಳೂರು ತಾಲೂಕಿನ ತರೀಕೆರೆ ತಾಲೂಕಿನ ಸುಣ್ಣದ ಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಾವನ್ನಪ್ಪಿದವನನ್ನು  ಪ್ರದೀಪ್ (30) ಎಂದು ಗುರುತಿಸಲಾಗಿದೆ.

ನಡೆದಿದ್ದೇನು..??

ಮಂಗಳವಾರ ರಾತ್ರಿ ಪ್ರದೀಪ್ ಕುರ್ಚಿಯ ಕೆಳಗೆ ಪಟಾಕಿ ಇಟ್ಟುಕೊಂಡಿದ್ದ ವೇಳೆಯಲ್ಲಿ ಪಕ್ಕದಲ್ಲಿ ಸಿಡಿದ ಪಟಾಕಿಯ ಕಿಡಿ ಹಾರಿ ಬಂದು  ಚೇರ್ ಕೆಳಗಿನ ಪಟಾಕಿ ಸಿಡಿಯುವಂತಾಗಿ ಈ ಅವಘಡ ಸಂಭವಿಸಿದೆ.ಪಟಾಕಿ ಸಿಡಿದ ರಭಸಕ್ಕೆ ನೆಲದಿಂದ 5 ಅಡಿ ಯುವಕ ಮೇಲಕ್ಕೆ ಹಾರಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ.

ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯಲ್ಲಿ ರಾತ್ರಿ ಘಟನೆ ನಡೆದಿದೆ. ಅಡಕೆ ಗೋಟು (ಕಲ್ಲು ಆಟಂಬಾಂಬ್) ಪಟಾಕಿಯನ್ನ ಚೇರ್ ಕೆಳಗೆ ಇಟ್ಟುಕೊಂಡು ಕೂತಿದ್ದ ಯುವಕ ಪಟಾಕಿ ಸಿಡಿಯುತ್ತಿದ್ದಂತೆ ಮೇಲೆ ಹಾರಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಸ್ಥಳದಲ್ಲಿಯೇ ಯುವಕ ಸಾವನ್ನಪ್ಪಿದ್ದಾನೆ.

ಯುವಕನ ದೇಹದ ಸೂಕ್ಷ್ಮ ಜಾಗಕ್ಕೆ ಗಂಭೀರವಾದ ಹೊಡೆತ ಬಿದ್ದ ಪರಿಣಾಮ ಪ್ರದೀಪ್  ಸಾವು ಕಂಡಿದ್ದಾನೆ. ಮೂವರು ಮಕ್ಕಳಿಗೂ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಲ್ಲು ಆಟಂಬಾಂಬ್ ಪಟಾಕಿ ಸಿಡಿದ ರಭಸಕ್ಕೆ ಮನೆಯ ಗ್ಲಾಸ್ ಗಳು ಪುಡಿ-ಪುಡಿ ಆಗಿವೆ. ಪಟಾಕಿ ಸಿಡಿಸುವದನ್ನು ನೋಡುತಿದ್ದ 12 ವರ್ಷದ ಬಾಲಕ, ಈತನ ಜೊತೆಗೆ ಇದ್ದ 14 ವರ್ಷದ ಬಾಲಕನನ್ನು  ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.15 ವರ್ಷದ ಮತ್ತೋರ್ವ ಬಾಲಕನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

39 minutes ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

49 minutes ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 hour ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

5 hours ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

6 hours ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

6 hours ago