ರಿಪ್ಪನ್‌ಪೇಟೆ : ಅಂದರ್ – ಬಾಹರ್ ಆಡುತ್ತಿದ್ದ 8 ಜನ ಅಂದರ್ – 14 ಸಾವಿರ ರೂ ನಗದು ವಶ
ರಿಪ್ಪನ್‌ಪೇಟೆ : ಪಟ್ಟಣದ ಗವಟೂರು ಗ್ರಾಮದ ಖಾಸಗಿ ಕಟ್ಟಡದ ಹಿಂಭಾಗದಲ್ಲಿ ಹಣವನ್ನು ಪಣಕಿಟ್ಟು ಅಂದರ್ ಬಾಹರ್ ಇಸ್ಪೀಟ್ ಆಟವನ್ನು ಕಾನೂನು ಬಾಹಿರವಾಗಿ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ 14,700 ರೂ ನಗದು ವಶಪಡಿಸಿಕೊಳ್ಳಲಾಗಿದೆ.
ಗವಟೂರು ಗ್ರಾಮದ ಖಾಸಗಿ ಕಟ್ಟಡವೊಂದರ ಹಿಂಭಾಗದಲ್ಲಿ ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ವರ್ತಮಾನ ಪಡೆದ ರಿಪ್ಪನ್‌ಪೇಟೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿ ಜೂಜಾಟ ಕ್ಕೆ ತೊಡಗಿಸಿಕೊಂಡಿದ್ದ 14,700 ರೂಗಳನ್ನು 52 ಇಸ್ಪೀಟ್ ಎಲೆ, ಚಾರ್ಜರ್ ಲೈಟ್ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಆರೋಪಿಗಳಾದ ಉಜ್ಜಪ್ಪಗೌಡ,ವಿಜಯ್ ಕುಮಾರ್ ,ಚಂದ್ರಚಾರ್ಯ , ರಮೇಶ್ ,ಮಂಜುನಾಥ ,ನವೀನ್ ಹಾಗೂ ಸೋಮಶೇಖರ್ ವಿರುದ್ದ ಪ್ರಕರಣ ದಾಖಲಿಸಿ ವಶಕ್ಕೆ ಪಡೆಯಲಾಗಿದೆ.
ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ಜಿ ಕೆ, ಎ ಎಸ್ ಪಿ ಅನಿಲ್ ಕುಮಾರ್, ಎನ್ ಬೂಮರೆಡ್ಡಿ ತೀರ್ಥಹಳ್ಳಿ ಉಪ ವಿಭಾಗದ ಡಿ ವೈ ಎಸ್ ಪಿ ಗಜಾನನ ಎಂ ಸುತಾರ, ಸರ್ಕಲ್ ಇನ್ಸ್ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ಮಾರ್ಗದರ್ಶನದಲ್ಲಿ ಪ್ರವೀಣ್ ಎಸ್ ಪಿ ರವರು ಸಿಬ್ಬಂದಿಗಳಾದ ಉಮೇಶ್ , ಶಿವಕುಮಾರ್ ,ಚೆನ್ನಪ್ಪ, ಮಧುಸೂಧನ್ ಹಾಗೂ ಇನ್ನಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್