ರಿಪ್ಪನ್ ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್
ರಿಪ್ಪನ್ ಪೇಟೆ : ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಪೂಜಿನಗರ ಇವರ ಸಹಯೋಗದಲ್ಲಿ ನಡೆದ ಯೋಗ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್ಪೇಟೆಯ ಯೋಗ ಪಟುಗಳು ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು, ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.
ಪುರುಷರ ವಿಭಾಗದಲ್ಲಿ ತೃತೀಯ ಬಿಕಾಂ ತರಗತಿಯ ಆಕಾಶ್. ಕೆ. ಆರ್, ಮೊಹ್ಮದ್ ಮುಸ್ತಾಫ, ನಂದನ್ಕುಮಾರ್. ಇ, ಅಭಿಷೇಕ್. ಎನ್, ಕಾರ್ತಿಕ್. ಎನ್. ಜಿ ಪ್ರಥಮ ಸ್ಥಾನ ಪಡೆದಿದ್ದು, ಮಹಿಳಾ ವಿಭಾಗದಲ್ಲಿ ತೃತೀಯ ಬಿಎ, ಮೇಘ. ಕೆ. ಎನ್, ಶೈಲಜಾ. ಜೆ. ಎಂ, ಸನು, ಜಯಶ್ರೀ ಹಾಗೂ ತೃತೀಯ ಬಿಕಾಂನ ಸಂಧ್ಯಾ. ಹೆಚ್. ಎ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಅಭಿಷೇಕ. ಎನ್ ಮತ್ತು ಸಂಧ್ಯಾ. ಹೆಚ್. ಎ ಈ ಕ್ರೀಡಾ ಪಟುಗಳು ಅಂತರ್ವಿಶ್ವವಿದ್ಯಾಲಯ ಪಂದ್ಯಾವಳಿಗೆ ಆಯ್ಕೆಯಾಗಿರುತ್ತಾರೆ.
ಈ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ. ಟಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಕುಮಾರಸ್ವಾಮಿ. ಕೆ. ಸಿ, ಬೋಧಕ/ಬೋಧಕೇತರ ಸಿಬ್ಬಂದಿ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್