ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 40 ಶಾಸಕರಿಗೆ ನಿಗಮ ಭಾಗ್ಯ..! | ಚಳಿಗಾಲ ಅಧಿವೇಶನದೊಳಗೆ ಆದೇಶ..!!

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 40 ಶಾಸಕರಿಗೆ ನಿಗಮ ಭಾಗ್ಯ..! | ಚಳಿಗಾಲ ಅಧಿವೇಶನದೊಳಗೆ ಆದೇಶ..!!
ಶಾಸಕರು, ವಿಧಾನಪರಿಷತ್ ಸದಸ್ಯರೂ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಸೇರಿದಂತೆ 40 ಮಂದಿಯನ್ನು ಮೊದಲ ಹಂತದಲ್ಲಿ ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದ್ದು ಒಂದೆರಡು ದಿನಗಳಲ್ಲಿ ಅಂತಿಮ ಪಟ್ಟಿ ಹೊರಬಿಳಲಿದೆ.ತಪ್ಪಿದಲ್ಲಿ ವಿಧಾನಮಂಡಲ ಅಧಿವೇಶನಕ್ಕೂ ಮೊದಲೇ ಅಂತಿಮ ಪಟ್ಟಿ ಹೊರ ಬೀಳುವುದು ಗ್ಯಾರಂಟಿಯಾಗಿದೆ.

ಮೂರು ಬಾರಿ ಶಾಸಕರಾಗಿರುವ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರಿಗೆ ನಿಗಮ ಮಂಡಳಿ ಸ್ಥಾನಮಾನ ದೊರೆಯುವ ಸಾಧ್ಯತೆ ಹೆಚ್ಚಿದ್ದು ಹಿರಿಯ ಮುಖಂಡರು ಹಸಿರು ನಿಶಾನೆ ತೋರಿಸಿದ್ದಾರೆ ಎನ್ನಲಾಗುತ್ತಿದೆ.

ಬುಧವಾರ ನಗರಕ್ಕೆ ಆಗಮಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಹತ್ವದ ಮಾತುಕತೆಯನ್ನು ನೆಡೆಸಿದ್ದಾರೆ. ಈ ಹಿಂದೆಯೆ ನಿಗಮ ಮಂಡಳಿ ಸ್ಥಾನಮಾನಕ್ಕೆ ಸಂಭಂದಿಸಿದಂತೆ ಎರಡು ಸುತ್ತಿನ ಚರ್ಚೆಗಳು ನಡೆದಿದ್ದು, ಬುಧವಾರ ನಡೆದ ಸಭೆ ಬಹುತೇಕ ಅಂತಿಮ ಎಂದು ಹೇಳಲಾಗಿದೆ. ಎರಡರಿಂದ-ಮೂರಕ್ಕೂ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆಯಾಗಿರುವವರನ್ನು ನಿಗಮ ಮಂಡಳಿಗಳಿಗೆ ಪರಿಗಣಿಸಲಾಗುತ್ತಿದೆ.

ಇದರಲ್ಲಿ ನಾಲ್ಕೈದು ಮಂದಿ ವಿಧಾನಪರಿಷತ್ ಸದಸ್ಯರೂ ಸೇರಿದ್ದಾರೆ.
ಸಚಿವ ಸಂಪುಟದಲ್ಲಿ ಅವಕಾಶ ಸಿಗದೆ ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸಲು ನಿಗಮ ಮಂಡಳಿಗಳ ಸ್ಥಾನಮಾನ ಕೊಟ್ಟು ಸಮಾಧಾನ ಪಡಿಸಲು ಕಾಂಗ್ರೆಸ್ ಮುಂದಾಗಿದೆ.

ಮೂಲಗಳ ಪ್ರಕಾರ ಬೇಳೂರು ಗೋಪಾಲಕೃಷ್ಣ, ಬಸನಗೌಡ ದದ್ದಲ್, ಯಶವಂತರಾಯ ಗೌಡ ವಿಠಲಗೌಡ ಪಾಟೀಲ್, ಹಂಪನಗೌಡ ಬಾದರ್ಲಿ, ರಾಘವೇಂದ್ರ ಹಿಟ್ನಾಳ್, ಪ್ರಕಾಶ್‍ಕೋಳಿವಾಡ, ವಿಜಯಾನಂದ ಕಾಶಪ್ಪನವರ್, ಎಂ.ವೈ.ಪಾಟೀಲ್, ಅಲ್ಲಂಪ್ರಭು ಪಾಟೀಲ್,ಪ್ರಸಾದ್ ಅಬ್ಬಯ್ಯ, ಶ್ರೀನಿವಾಸ್ ಮಾನೆ, ಜಿ.ಎನ್.ಗಣೇಶ್, ಈ ತುಕಾರಾಮ್, ಟಿ.ರಘುಮೂರ್ತಿ, ಟಿ.ಡಿ.ರಾಜೇಗೌಡ, ಡಾ.ರಂಗನಾಥ್, ಎಸ್.ಆರ್.ಶ್ರೀನಿವಾಸ್, ಕೆ.ವೈ.ನಂಜೇಗೌಡ, ರಿಜ್ವಾನ್ ಅರ್ಷದ್, ಪ್ರಿಯಾಕೃಷ್ಣ, ಬಿ.ಶಿವಣ್ಣ, ಎಚ್.ಸಿ.ಬಾಲಕೃಷ್ಣ, ಕೆ.ಎಂ.ಶಿವಲಿಂಗೇಗೌಡ, ವಿನಯ್‍ಕುಲಕರ್ಣಿ, ನರೇಂದ್ರಸ್ವಾಮಿ ಅವರ ಹೆಸರುಗಳು ಸಂಭವನೀಯರ ಪಟ್ಟಿಯಲ್ಲಿ ಸೇರಿವೆ.

ಮೊದಲರೆಡು ಸಭೆಗಳಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರುಗಳ ನಡುವೆ ಹೊಂದಾಣಿಕೆಯಾಗಿರಲಿಲ್ಲ. ಇನ್ನೂ ಕೆಲವು ಹಿರಿಯರ ಹೆಸರುಗಳು ಬಿಟ್ಟುಹೋಗಿದ್ದವು. ಬಹಳಷ್ಟು ಮಂದಿ ತಮಗೆ ನಿಗಮ ಮಂಡಳಿ ಬೇಡ. ಎರಡೂವರೆ ವರ್ಷಗಳ ಬಳಿಕ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಗೊಂದಲ ಉಂಟಾಗಿತ್ತು.

ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆ.ಸಿ.ವೇಣುಗೋಪಾಲ್ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಜತೆ ಚರ್ಚೆ ನಡೆಸಿ ಬಹುತೇಕ ಸ್ಪಷ್ಟ ನಿರ್ಣಯ ರೂಪಿಸಿದ್ದಾರೆ ಎನ್ನಲಾಗಿದೆ.

ಹೈಕಮಾಂಡ್‍ನ ಸಂದೇಶದೊಂದಿಗೆ ಬುಧವಾರ ಬೆಂಗಳೂರಿಗೆ ಆಗಮಿಸಿದ್ದ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಜೋತೆಗೆ ಸಭೆನೆಡೆಸಿದ್ದಾರೆ. ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿದ್ದು ವರಿಷ್ಠರಿಗೆ ಕಳುಹಿಸಿಕೊಡಲಾಗಿದೆ. ವರಿಷ್ಠರು ಅಂಕಿತ ಹಾಕಲಿದ್ದು ಇನ್ನೆರಡು ದಿನಗಳಲ್ಲಿ ನೇಮಕಾತಿ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಆರ್ಥಿಕವಾಗಿ ಸುಸ್ಥಿಯಲ್ಲಿರುವ 90ಕ್ಕೂ ಹೆಚ್ಚು ನಿಗಮ ಮಂಡಳಿಗಳಿಗೆ ನೇಮಕಾತಿ ನಡೆಯುವುದು ಖಚಿತವಾಗಿದ್ದು
ಮೊದಲ ಹಂತದಲ್ಲಿ 40ಕ್ಕೂ ಹೆಚ್ಚು ನಿಗಮ ಮಂಡಳಿಗಳಿಗೆ ಹಿರಿಯ ಶಾಸಕರನ್ನು ನೇಮಿಸಲಾಗುತ್ತಿದೆ. ಎರಡನೇ ಹಂತದಲ್ಲಿ ಕಾರ್ಯಕರ್ತರು, ಪ್ರಮುಖ ನಾಯಕರನ್ನು ಪರಿಗಣಿಸುವ ಸಾಧ್ಯತೆ ಇದ್ದು ಕಾರ್ಯಕರ್ತರ ನೇಮಕಾತಿಯ ಕುರಿತಂತೆಯೂ ಸಭೆಯಲ್ಲಿ ಸುಧೀರ್ಘ ಚರ್ಚೆಯಾಗಿದೆ ಎಂದು ಹೇಳಲಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

6 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

7 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

11 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

15 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

18 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago