ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್ನಲ್ಲಿ ದೃಶ್ಯ ಸೆರೆ
ಶಿಕಾರಿಪುರ ತಾಲೂಕಿನ ಬಿಜೆಪಿ (BJP) ಅಧ್ಯಕ್ಷ ಹಾಗೂ ಅರಶಿಣಗೆರೆ ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರು ಜಾಗದ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ (Assault) ನಡೆಸಲು ಯತ್ನಿಸಿದ ಘಟನೆ ಅರಿಶಿಣಗಟ್ಟದಲ್ಲಿ ನಡೆದಿದೆ.
ಶರ್ಟ್ ಹರಿದ ಸ್ಥಿತಿಯಲ್ಲಿ ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ ದೃಶ್ಯವನ್ನು ಮಹಿಳೆಯ ಕುಟುಂಬಸ್ಥರು ಮೊಬೈಲ್ನಲ್ಲಿ ಸೆರೆ ಹಿಡಿದ್ದಾರೆ.
“ಶಿಕಾರಿಪುರ ಬಿಜೆಪಿ ಅಧ್ಯಕ್ಷನಿಂದ ಮಹಿಳೆಯ ಮೇಲೆ ಹಲ್ಲೆಗೆ ಯತ್ನ, ಮೊಬೈಲ್ನಲ್ಲಿ ದೃಶ್ಯ ಸೆರೆ”
ಗುಂಪು ಕಟ್ಟಿಕೊಂಡು ಶೋಭಾ ಹಾಗೂ ಪತಿ ರಾಮು ಎಂಬುವರ ಮನೆಗೆ ನುಗ್ಗಿದ ವೀರೇಂದ್ರ ಪಾಟೀಲ್, ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಹಲವು ಬಾರಿ ಈ ರೀತಿ ಗಲಾಟೆ ಮಾಡಿರುವುದಾಗಿ ಕುಟುಂಬಸ್ಥರು ಅರೋಪಿಸುತ್ತಿದ್ದಾರೆ.
ವಿಡಿಯೋದಲ್ಲಿ ಇರುವಂತೆ, ವೀರೇಂದ್ರ ಪಾಟೀಲ್ ಅವರು ಮಹಿಳೆ ಶೋಭಾ ಅವರ ಕುತ್ತಿಗೆ, ಕೈ ಹಿಡಿದು ಅವಾಜ್ ಹಾಕಿದ್ದನ್ನು ಕೂಡ ಕಾಣಬಹುದು. ಅಲ್ಲದೆ, ವೀರೇಂದ್ರ ಮತ್ತು ಮಹಿಳೆ ನಡುವಿನ ಹೊಡೆದಾಟದ ವೇಳೆ ಮಹಿಳೆಯ ಮಗಳು ಕಿರುಚಾಡುವುದನ್ನು ಕೇಳಬಹುದು ಮತ್ತು ಅಮ್ಮನ ಬಟ್ಟೆ ಹರಿಯುತ್ತಿದ್ದಾರೆ ಎಂದು ಹೇಳುವುದನ್ನು ಕೇಳಬಹುದು.
ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವು | ಕುಟುಂಬಸ್ಥರಿಗೆ ಶಾಸಕ ಬೇಳೂರು ಸಾಂತ್ವಾನ
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್