ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ
ಶಿವಮೊಗ್ಗ : ಹೆಂಡತಿಗೆ ಅನಾರೋಗ್ಯವಿದೆ ಎಂದು ಹೇಳಿ ಕಾರನ್ನು ಸ್ನೇಹಿತನಿಂದ ಪಡೆದುಕೊಂಡು ವಾಪಾಸ್ ಕೊಡದೆ ಮೋಸ ಮಾಡಿದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 08 ಕಾರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರ್.ಎಂ.ಎಲ್ ನಗರದ ನಿವಾಸಿ ಸೈಯದ್ ಸಾದಿಕ್‌ರವರ ಟಾಟಾ ಇನ್ನೋವಾ ಕಾರನ್ನು ಆತನ ಪರಿಚಯಸ್ಥನಾದ ಕಿರಣ್ ಕುಮಾರ್ @ ಗುಂಡ ಎಂಬಾತ ತೆಗೆದುಕೊಂಡು ಹೋಗಿ ಕಾರನ್ನು ವಾಪಾಸ್ ಕೊಡದೇ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಮೋಸ ಮಾಡಿದ್ದಾನೆಂದು, ಸೈಯ್ಯದ್ ಸಾದಿಕ್ ದೂರು ನೀಡಿದ್ದರು.
ಪ್ರರಕಣದಲ್ಲಿ ಆರೋಪಿ ಹಾಗೂ ಕಾರಿನ ಪತ್ತೆಗಾಗಿ ಎಸ್.ಪಿ ಮಿಥುನ್‌ಕುಮಾರ್ ಮಾರ್ಗದರ್ಶನದಲ್ಲಿ ಹಿರಿಯ ಅಧಿಕಾರಿಗಳ ವಿಶೇಷ ತಂಡ ರಚಿಸಲಾಗಿತ್ತು. ತಂಡವು ಸೋಮವಾರ ಪ್ರಕರಣದ ಆರೋಪಿ ಕಿರಣ್ (35) ಈತನನ್ನು ಬಂಧಿಸಿ ಅಂದಾಜು 10 ಲಕ್ಷ ರೂ.ಗಳ 2 ಟೊಯೋಟಾ ಇನ್ನೋವಾ ಕಾರು, 3 ಸ್ವಿಫ್ಟ್ ಡಿಸೈರ್ ಕಾರು ಮತ್ತು 3 ಮಾರುತಿ ಸುಜುಕಿ ಎರ್ಟಿಗಾ ಕಾರು ಸೇರಿದಂತೆ ಒಟ್ಟು 8 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.
ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ ಅಭಿನಂದಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್