w
Headlines
Home » 03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ 07 ವರ್ಷ ಕಠಿಣ ಜೈಲು ಶಿಕ್ಷೆ..!!

03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ 07 ವರ್ಷ ಕಠಿಣ ಜೈಲು ಶಿಕ್ಷೆ..!!

03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ ದಂಡದ ಜೊತೆಗೆ 07 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.
2021ನೇ ಸಾಲಿನಲ್ಲಿ ಶಿಕಾರಿಪುರ ತಾಲ್ಲೂಕಿನ 17 ವರ್ಷದ ಬಾಲಕನು 3 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆಂದು ನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಲಕ್ಷ್ಮಣ್ ಜೆ, ಪೊಲೀಸ್ ನಿರೀಕ್ಷಕರು ಶಿಕಾರಿಪುರ ಗ್ರಾಮಾಂತರ ಠಾಣೆ ರವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದರು .

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹರಿಪ್ರಸಾದ್ ಮತ್ತು ಮಮತ ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದು, ಶಿವಮೊಗ್ಗದ FTSC-1 ನ್ಯಾಯಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ,‌ ನ್ಯಾಯಾಧಿಶರಾದ ಲತಾ ರವರು ದಿನಾಂಕಃ 09-11-2023 ರಂದು ಕಾನೂನು ಸಂಘರ್ಷಕ್ಕೊಳಗಾದ ಬಾಲಕನಿಗೆ 07 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 1 ತಿಂಗಳು ಸಾದಾ ಜೈಲು ಶಿಕ್ಷೆ ವಿಧಿಸಿ ಆದೇಶಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.