ಕಾಡುಪ್ರಾಣಿಯೊಂದು ದಾರಿಗೆ ಅಡ್ಡಬಂದ ಪರಿಣಾಮ ಭೀಕರ ಅಪಘಾತವೊಂದು ಸಂಭವಿಸಿದೆ.
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಯರೆಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವರು ಸಾವನ್ನಪ್ಪಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಿಕಾರಿಪುರದ ಇಟ್ಟಿಗೆಹಳ್ಳಿ ಮೂಲದ ಗಣೇಶ್ ಮೃತರು, ಇನ್ನೂ ಘಟನೆಯಲ್ಲಿ ಇವರ ಪತ್ನಿ ರಂಜಿತಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಪತ್ನಿ ರಂಜಿರನ್ನು ಅವರು ಕೆಲಸ ಮಾಡುತ್ತಿದ್ದ ಜಾಗಕ್ಕೆ ಬಿಡಲು ಹೊರಟಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಇಲ್ಲಿನ ಯರೆಕಟ್ಟೆ ಬಳಿಯಲ್ಲಿ ಇರುವ ಬೂತಪ್ಪನ ಕಟ್ಟೆಯ ಹತ್ತಿರ ವನ್ಯಜೀವಿಯೊಂದು ಅಡ್ಡಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಮುಂದಾದ ಗಣೇಶ್ ತಮ್ಮ ಬೈಕ್ನ್ನ ರಸ್ತೆ ಬದಿಯ ಕಟ್ಟೆಗೆ ಡಿಕ್ಕಿ ಹೊಡೆಸಿದ್ದಾರೆ. ಪರಿಣಾಮ ಇಬ್ಬರು ಕೆಳಕ್ಕೆ ಬಿದ್ದಿದ್ದಾರೆ.
ಈ ವೇಳೆ ಗಣೇಶ್ ತೀವ್ರ ಪೆಟ್ಟಿನಿಂದ ಸಾವನ್ನಪ್ಪಿದ್ದಾರೆ. ರಂಜಿತಾ ಗಾಯಗೊಂಡಿದ್ದಾರೆ. ಸದ್ಯ ಅವರನ್ನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್