Anandapura|ಅನಧಿಕೃತ ಕಲ್ಲು ಕ್ವಾರೆಗಳ ಮೇಲೆ ದಾಳಿ – ಯಂತ್ರೋಪಕರಣಗಳನ್ನು ಒಡೆದು ಹಾಕಿದ ಅಧಿಕಾರಿ – ಕಾರ್ಮಿಕರ ಆಕ್ರೋಶ

ಅನಧಿಕೃತ ಕಲ್ಲು ಕ್ವಾರೆಗಳ ಮೇಲೆ ದಾಳಿ – ಯಂತ್ರೋಪಕರಣಗಳನ್ನು ಒಡೆದು ಹಾಕಿದ ಅಧಿಕಾರಿ – ಕಾರ್ಮಿಕರ ಆಕ್ರೋಶ

ಆನಂದಪುರ : ಅಕ್ರಮ ಕ್ವಾರೆಗಳ ಮೇಲೆ ದಿಡೀರ್ ದಾಳಿ ನಡೆಸಿದ ಅಧಿಕಾರಿಗಳು ಕಲ್ಲು ಕ್ವಾರೆಗೆ ಉಪಯೋಗಿಸುತಿದ್ದ ಯಂತ್ರೋಪಕರಣಗಳನ್ನು ನಾಶಪಡಿಸಿ ಸಂಬಂದಿಸಿದ ವಾಹನಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಕಲ್ಲು ತುಂಬಿದ 2 ಲಾರಿ. ಕಲ್ಲುಗಳನ್ನು ಕಟಿಂಗ್ ಮಾಡುವ ಒಂದು ಟ್ಯಾಕ್ಟರ್ ಮಿಷನ್, ಕಲ್ಲು ಕೊಯ್ಯಲು ಉಪಯೋಗಿಸುತ್ತಿದ್ದ ಕಟಿಂಗ್ ಯಂತ್ರೋಪಕರಣಗಳನ್ನು ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿ ಅವಿನಾಶ್ ನಾಶಪಡಿಸಿರುವ ಘಟನೆ ನಡೆದಿದೆ.

ದಿಡೀರ್ ದಾಳಿ ನಡೆಸಿದ ಭೂ‌ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿಗಳು  ಮಲ್ಲಂದೂರಿನಲ್ಲಿ ಒಂದು ಲಾರಿ ದಾಸನಕೊಪ್ಪದಲ್ಲಿ ಒಂದು ಲಾರಿ ವಶಪಡಿಸಿಕೊಂಡು ಚನ್ನಶೆಟ್ಟಿಕೊಪ್ಪದ ಅನಧಿಕೃತ ಕಲ್ಲುಕ್ವಾರೆ ಹಾಗೂ ಜಂಬಾನಿ ಗ್ರಾಮದ ಅನಧಿಕೃತ ಕಲ್ಲು ಕ್ವಾರೆಗಳ ಮೇಲೆ ದಾಳಿ ನಡೆಸಿ ಕಲ್ಲು ಕ್ವಾರಿಯಲ್ಲಿ ಕಲ್ಲು ಕೀಳಲು ಉಪಯೋಗಿಸುತ್ತಿದ್ದ ಯಂತ್ರೋಪಕರಣಗಳನ್ನು ನಾಶಪಡಿಸಿದ್ದಾರೆ ಎನ್ನಲಾಗುತ್ತಿದೆ.


ಅಧಿಕಾರಿಗಳು ಯಂತ್ರೋಪಕರಣಗಳನ್ನು ನಾಶಪಡಿಸುತಿದ್ದಾರೆ ಎಂಬ ವಿಷಯ ತಿಳಿಯುತಿದ್ದಂತೆ ಸುತ್ತಮುತ್ತಲಿನ ಕಲ್ಲು ಕ್ವಾರೆಯ ಮಾಲೀಕರು ಹಾಗೂ ಕಾರ್ಮಿಕರು ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿ  ಅವಿನಾಶ್ ರವರನ್ನು ಅಡ್ಡಕಟ್ಟಿ ಈ ರೀತಿ ವಾಹನಗಳನ್ನ ನಾಶ ಮಾಡಬೇಡಿ  ಮಾಡಿದ ತಪ್ಪಿಗೆ ದಂಡ ಹಾಕಿ ದಯವಿಟ್ಟು ಈ ರೀತಿ ಯಂತ್ರೋಪಕರಣಗಳನ್ನು ನಾಶ ಮಾಡಬೇಡಿ ಎಂದು ಮನವಿ ಮಾಡಿರುತ್ತಾರೆ.

ಮೇಲಾಧಿಕಾರಿಗಳ ಆದೇಶದಂತೆ ಹಾಗೂ ದೂರಿನನ್ವಯ ದಾಳಿ  ಮಾಡಿರುವುದಾಗಿ ಗಣಿ ಅಧಿಕಾರಿ ಅವಿನಾಶ್ ಸ್ಪಷ್ಟವಾಗಿ ತಿಳಿಸಿದ್ದಾರೆ ಈ ಸಂಧರ್ಭದಲ್ಲಿ ಸ್ಥಳದಲ್ಲಿ ಗೊಂದಲಮಯ ವಾತಾವರಣ ಉಂಟಾಗಿತ್ತು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು.

ವಶಪಡಿಸಿಕೊಂಡ ವಾಹನಗಳು ಹಾಗೂ ಯಂತ್ರೋಪಕರಣಗಳನ್ನು ಆನಂದಪುರ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

2 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

4 hours ago

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies…

4 hours ago

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು

ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…

20 hours ago

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ

ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…

24 hours ago

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್

ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್‌ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…

1 day ago