Anandapura |ಆನಂದಪುರದ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಟ್ರೈನ್ ಗೆ ಸಿಲುಕಿ ನಿಗೂಡ ಸಾವು
ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ರೈಲ್ವೆ ಹಳಿ ಮೇಲೆ, ರೈಲಿಗೆ ತಲೆಕೊಟ್ಟು ಮೃತಪಟ್ಟ ರೀತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಅರುಣ್ ಕುಮಾರ್ ಅವರು ಕುಂಸಿಯಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ.
ಬೆಂಗಳೂರಿನಿಂದ ಬೆಳಗ್ಗೆ ರೈಲಿನಲ್ಲಿ ಆಗಮಿಸಿ ಕುಂಸಿ ನಿಲ್ದಾಣದಲ್ಲಿ ಇಳಿದಿದ್ದಾರೆ. ತಾವು ಬಂದಿದ್ದ ರೈಲಿಗೆ ಸಿಲುಕಿಯೇ ಅವರು ಸಾವನ್ನಪ್ಪಿದ್ದಾರೆ.
ಘಟನೆ ಹೇಗಾಯ್ತು ಎಂಬುದು ಇನ್ನೂ ಸಹ ಸ್ಪಷ್ಟವಾಗಿಲ್ಲ. ಈ ಸಂಬಂಧ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅರುಣ್ ಕುಮಾರ್ ಅವರು ಬಿಹಾರ ಮೂಲದವರು ಎಂದು ತಿಳಿದು ಬಂದಿದೆ.