ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಒತ್ತಾಯ – ಪೋಷಕರ ಆರೋಪ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಮೊಟ್ಟೆ ತಿನ್ನಲು ಒತ್ತಾಯ ಮಾಡುತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರೊಬ್ಬರು ಶಾಲೆಯ ಬ್ರಾಹ್ಮಣ ವಿದ್ಯಾರ್ಥಿನಿಯೊಬ್ಬರಿಗೆ ಮಂಗಳವಾರ ಒತ್ತಾಯ ಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದು ಇದರಿಂದ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರಾಗಿದ್ದು ಇದರಿಂದ ನಮ್ಮ ಧಾರ್ಮಿಕ ಆಚರಣೆಗೆ ಧಕ್ಕೆಯಾಗಿರುತ್ತದೆ ಎಂದು ಪೋಷಕರಾದ ಶ್ರೀಕಾಂತ್ ಆರೋಪಿಸಿದ್ದಾರೆ.
ಇಂತಹ ಘಟನೆಗಳು ಮಕ್ಕಳ ಗಂಭೀರ ಪರಿಣಾಮ ಬೀರುತ್ತದೆ ಕೂಡಲೇ ಮೊಟ್ಟೆ ತಿನ್ನಲು ಒತ್ತಾಯಿಸಿದ ಮುಖ್ಯ ಶಿಕ್ಷಕ ಹಾಗೂ ಸಹ ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳುವಂತೆ ಶಾಸಕರು , ಜಿಲ್ಲಾ ಉಪ ನಿರ್ದೇಶಕರು ,ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ , ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಪೋಷಕರಾದ ಶ್ರೀಕಾಂತ್ ಹೇಳಿದರು.