Hosanagara | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ – ಮರಳು ಮಾಫ಼ಿಯಾಕ್ಕೆ ಸಿಂಹಸ್ವಪ್ನವಾದ ಪಿಎಸ್ಐ ಶಿವಾನಂದ್
ಹೊಸನಗರ : ಅಕ್ರಮವಾಗಿ ಮರಳು ಸಾಗಾಟ ನಡೆಸುತಿದ್ದ ಟಿಪ್ಪರ್ ವಾಹನವನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೋಮವಾರ ಅಕ್ರಮವಾಗಿ ಮರಳು ಸಾಗಿಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ ಶಿವಾನಂದ್ ವೈ ಕೆ ರವರ ನೇತೃತ್ವ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಟಿಪ್ಪರ್ (KA 17 F 2543) ಲಾರಿಯನ್ನು ವಶಕ್ಕೆ ಪಡೆದಿದ್ದಾರೆ
ಅಕ್ರಮ ಮರಳು ದಂಧೆಕೋರರಿಗೆ ಸಿಂಹಸ್ವಪ್ನವಾಗಿರುವ ಪಟ್ಟಣದ ಪಿಎಸ್ಐ ಶಿವಾನಂದ್ ವೈ ಕೆ ಕಳೆದ 15 ದಿನಗಳಲ್ಲಿ ಒಟ್ಟು 6 ಅಕ್ರಮ ಮರಳು ಸಾಗಾಣಿಕೆ ವಾಹನಗಳನ್ನು ವಶಕ್ಕೆ ಪಡೆದು ಒಟ್ಟು 1,23,278 ರೂ ದಂಡ ವಸೂಲಿ ಮಾಡುವ ಮೂಲಕ ಮರಳು ಮಾಫ಼ಿಯಾ ದೊರೆಗಳಿಗೆ ಎಚ್ಚರಿಕೆಯ ಗಂಟೆ ರವಾನಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಅವಿನಾಶ್ ,ಗಂಗಾಧರ್ ಮತ್ತು ಸುನೀಲ್ ಇದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್