ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ – ಅದೃಷ್ಟವಶಾತ್ ಪ್ರಾಣಾಪಯದಿಂದ ದಂಪತಿಗಳು ಪಾರು
ಭಾನುವಾರ ತಡರಾತ್ರಿ ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಆಕಾರದ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡು ದಂಪತಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್. ಕುನ್ನೂರು ಗ್ರಾಮದಲ್ಲಿ ನಡೆದಿದೆ.
ನಿನ್ನೆ ರಾತ್ರಿ 8:00 ಗಂಟೆಯಿಂದ ಸುರಿದ ಬಿರುಗಾಳಿ ಸಹಿತ ಗುಡುಗು ಸಿಡಿಲಬ್ಬರದ ಧಾರಾಕಾರ ಮಳೆಗೆ ಹೆಚ್. ಕುನ್ನೂರು ಗ್ರಾಮದ ತಿಮ್ಮಪ್ಪ ಎಂಬುವವರ ಮನೆ ಮೇಲೆ ರಾತ್ರಿ 11 ರ ಸುಮಾರಿಗೆ ಮನೆ ಪಕ್ಕದಲ್ಲಿದ್ದ ಬೃಹತ್ ಆಕಾರದ ಮರ ಬುಡ ಸಮೇತವಾಗಿ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿದ್ದು ಅದೃಷ್ಟವಶಾತ್ ಈ ಘಟನೆಯಲ್ಲಿ ಆಶಾ ಕಾರ್ಯಕರ್ತೆ ವಿನೂತ, ತಿಮ್ಮಪ್ಪ ದಂಪತಿಗಳು ಸಣ್ಣ-ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಘಟನೆಯಲ್ಲಿ ಮನೆಯಲ್ಲಿದ್ದ ಟಿವಿ ಸೇರಿದಂತೆ ದವಸ, ಧಾನ್ಯಗಳು, ಆಹಾರ ಪದಾರ್ಥಗಳು ಸೇರಿದಂತೆ ಇನ್ನಿತರ ವಸ್ತುಗಳು ನೀರುಪಾಲಾಗಿದ್ದು ಮೇಲ್ಛಾವಣಿಗೆ ಹಾಕಿದ್ದ ಸಿಮೆಂಟ್ ಶೀಟ್, ಹೆಂಚುಗಳು ಸೇರಿದಂತೆ ಭಾಗಶಃ ಮನೆ ಜಖಂಗೊಂಡಿದೆ.
ವಿಷಯ ತಿಳಿಯುತ್ತಿದ್ದಂತೆ ಕೋಡೂರು ಗ್ರಾಪಂ ಅಧ್ಯಕ್ಷ ಉಮೇಶ್, ಸದಸ್ಯ ಮಂಜಪ್ಪ, ಪಿಡಿಒ ನಾಗರಾಜ್, ತಾಪಂ ಮಾಜಿ ಸದಸ್ಯ ಚಂದ್ರಮೌಳಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು, ಇನ್ನಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್