POSTMAN NEWS

ನೈಜ ಸುದ್ದಿ ನೇರ ಬಿತ್ತರ..

Ripponpet|ಅರಸಾಳು ಗ್ರಾಪಂ ಮಾಜಿ ಅಧ್ಯಕ್ಷ ಉಮಾಕರ್ ರವರಿಗೆ ಮಾತೃ ವಿಯೋಗ

ರಿಪ್ಪನ್‌ಪೇಟೆ – ಇಲ್ಲಿನ ಅರಸಾಳು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಉಮಾಕರ್ ಕಾನುಗೋಡು ರವರ ತಾಯಿ ಮಂಜಮ್ಮ(66) ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಗುರುವಾರ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಶಿವಮೊಗ್ಗದ ನಂಜಪ್ಪ ಲೈಫ಼್ ಕೇರ್ ಗೆ ಕರೆದೊಯ್ಯಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮಂಜಮ್ಮ ಮೃತಪಟ್ಟಿದ್ದಾರೆ.

ಮೃತರು ಉಮಾಕರ್ ಕಾನುಗೋಡು ಸೇರಿದಂತೆ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಇಂದು ಸಂಜೆ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.