w
Headlines
Home » Ripponpet | ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು

Ripponpet | ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು

ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು

ರಿಪ್ಪನ್‌ಪೇಟೆ : ಕೋಲಾರದಲ್ಲಿ ನ. 05 ರಿಂದ 07ರ ವರೆಗೆ ನಡೆದ ಬೆಂಗಳೂರು ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಶಾರದಾ, ರಾಮಕೃಷ್ಣ ವಿದ್ಯಾಲಯ ವಿದ್ಯಾರ್ಥಿಗಳು ಅಮೋಘ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಶಾರದ,ರಾಮಕೃಷ್ಣ ವಿದ್ಯಾಲಯದ 12 ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸಿದ್ದು 14 ವರ್ಷ
ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಹಾಗೂ 17 ವರ್ಷ ವಯೋಮಿತಿಯೊಳಗಿನ ಕಬಡ್ಡಿ ಪಂದ್ಯಾವಳಿಯಲ್ಲಿ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಜ್ಞಾನ, ಶ್ರಾವ್ಯ, ಐಶ್ವರ್ಯ, ದೀಕ್ಷಾ ಮತ್ತು ಸಂಜನ. 14 ವರ್ಷ ವಯೋಮಿತಿಯೊಳಗಿನ ಬಾಲಕಿಯರ ವಿಭಾಗದಲ್ಲಿ ಶ್ರೇಯ ಬಿ ಆರ್, ಶಮಿತಾ, ನಿಶ್ಚಿತ, ಅನುಷ್ಕಾ ಮತ್ತು ಸೋನಾಲಿ ಈ ಎಲ್ಲಾ 10 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಅನೀಶ್ ಮತ್ತು ಶ್ರೇಷ್ಠ ಈ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕಳೆದ ಬಾರಿ ಪಂಜಾಬ್ ನಲ್ಲಿ ನಡೆದ ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರಾದ ಶ್ರೇಯಾ ಬಿ ಆರ್ ನಾಯಕ್ ಮತ್ತು ಶ್ರಾವ್ಯ ಹೆಚ್ ಓ ಕರ್ನಾಟಕ ತಂಡವನ್ನು ಪ್ರತಿನಿಧಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ಈ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ ದೈಹಿಕ ಶಿಕ್ಷಕರಾದ ವಿನಯ್ ಹಾಗೂ ತಂಡದ ವ್ಯವಸ್ಥಾಪಕಿ ಶ್ಯಾಮಲಾ ಹಾಗೂ ತರಬೇತಿ ನೀಡಿದ ಎಲ್ಲರಿಗೂ ರಾಮಕೃಷ್ಣ ಸಮೂಹ ಸಂಸ್ಥೆಗಳ ಸಂಸ್ಥಾಪಕ ಡಿ.ಎಂ ದೇವರಾಜ್, ಮುಖ್ಯ ಶಿಕ್ಷಕ ರವಿ ಹಾಗೂ ವ್ಯವಸ್ಥಾಪಕ ಸಂದೇಶ್, ಹಿರಿಯ ಶಿಕ್ಷಕ ಗುರುರಾಜ್ ಹಾಗೂ ಸಂಸ್ಥೆಯ ಎಲ್ಲ ಶಿಕ್ಷಕರು ಹಾಗೂ ಎಲ್ಲಾ ಪೋಷಕರು ಅಭಿನಂದಿಸಿದ್ದಾರೆ.


“ಉಸ್ತುವಾರಿ ಮಂತ್ರಿ ಯಾರೆಂದು ಗೊತ್ತಿಲ್ಲ |ನನಗೆ CM,DCM ಬೆಂಬಲವಿದೆ – ಬೇಳೂರು ಗೋಪಾಲಕೃಷ್ಣ”

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.