ಗ್ರಾಮೀಣ ಯುವಕರಲ್ಲಿ ಕ್ರೀಡಾ ಚಟುವಟಿಕೆಯಿಂದ ಕ್ರೀಯಾಶೀಲ ಬದುಕು’’
ರಿಪ್ಪನ್‌ಪೇಟೆ;-ದೈನಂದಿನ ಕ್ರೀಡಾ ಚಟುವಟಿಕೆಯಲ್ಲಿ ಗ್ರಾಮಸ್ಥರು ಹಾಗೂ ಮಕ್ಕಳು ತೊಡಗಿಸಿಕೊಂಡಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವ ಜೊತೆಗೆ ಕ್ರೀಯಾಶೀಲರಾಗಿರಬಹುದು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಛತ್ರಪತಿ ಶಿವಾಜಿ ಯುವಕ ಸಂಘದವರು ಆಯೋಜಿಸಲಾದ ಕ್ರಿಕೇಟ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಕ್ರಿಕೇಟ್ ಬ್ಯಾಟಿಂಗ್ ಮಾಡಿ ನಂತರ ಮಾತನಾಡಿ ಗ್ರಾಮಸ್ಥರು ಒತ್ತಡದ ಬದುಕಿನಲ್ಲಲಿ ತಮ್ಮ ಅಲ್ಪ ಸಮಯವನ್ನು ವ್ಯಾಯಾಮ ಹಾಗೂ ಕ್ರೀಡೆಗಳಿಗೆ ಮೀಸಲಿಡಬೇಕು ಎಂದ ಅವರು ದೈಹಿಕ ಮತ್ತು ಮಾನಸಿಕವಾಗಿ ಸದೃಡರಾಗಲು ಕ್ರೀಡಾಕೂಟ ಸಹಕಾರಿಯಾಗಲಿದೆ ಎಂದರು.
ಹಾಗೂ ಕ್ರೀಡೆಯನ್ನು ಅಯೋಜಿಸುವ ಮಕ್ಕಳಿಗೆ ಮತ್ತು ಯುವಕಸಂಘದವರಿಗೆ ಅಧಿಕಾರ ಇದ್ದಾಗಲೂ ಮತ್ತು ಇಲ್ಲದಾಗಲೂ ಅರ್ಥಿಕ ನೆರವು ನೀಡಿ ಪ್ರೋತ್ಸಾಹಿಸಿರುವುದಾಗಿ ಹೇಳಿ ಇದರಿಂದ ಜನಸೇವೆಯೊಂದಿಗೆ ಅಭಿವೃದ್ದಿಯ ಬಗ್ಗೆ ಸಹ ಹೆಚ್ಚು ಒತ್ತು ನೀಡಲಾಗುವುದು ಎಂದ ಅವರು ಕ್ರೀಡೆಯೊಂದಿಗೆ ಯುವಜನಾಂಗದಲ್ಲಿನ ವೈಷಮ್ಯ ದೂರವಾಗಿ ಸಹೋದರತ್ವ ಬೆಳಸಲು ಸಹಕಾರಿಯಾಗುವುದೆಂದು ತಿಳಿಸಿದರು.
ಈ ಕ್ರೀಡಾ ಕೂಟದ ಸಮಾರಂಭದಲ್ಲಿ ಜಿ.ಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ,ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷಿö್ಮ,ಆರಸಾಳು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ,ಹಾಲಿ ಸದಸ್ಯ ಉಮಾಕರ್,ಗ್ರಾಪಂ ಸದಸ್ಯರಾದ ಆಸೀಫ಼್ ,ಗಣಪತಿ, ಉಂಡಗೋಡು ನಾಗಪ್ಪ,ಉಲ್ಲಾಸ್ ತೆಂಕೋಲ,ಚಂದ್ರಶೇಖರ್,ರಮೇಶಪ್ಯಾನ್ಸಿ,
ಪಿಎಸ್‌ಐ ಪ್ರವೀಣ್‌ಕುಮಾರ್ ಎಸ್.ಪಿ.ತಮ್ಮಡಿಕೊಪ್ಪ ಲೋಕೇಶ್, ರಾಜು ಹಾಗೂ ಛತ್ರಪತಿ ಶಿವಾಜಿ ಬಾಯ್ಸ್ ತಂಡದ ಸದಸ್ಯರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್