Headlines

Ripponpet | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಹಾರಿದ ಕಾರು – ತಪ್ಪಿದ ಭಾರಿ ಅನಾಹುತ

Ripponpet | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಹಾರಿದ ಕಾರು – ತಪ್ಪಿದ ಭಾರಿ ಅನಾಹುತ
ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ  ಘಟನೆ ನಡೆದಿದೆ.

ಪಟ್ಟಣದ ಹೊಸನಗರ ರಸ್ತೆಯಲ್ಲಿರುವ ತಾವರೆಕೆರೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಉರುಳಿ ಬಿದ್ದಿದೆ.
ಬೆಂಗಳೂರಿನಿಂದ ರಿಪ್ಪನ್‌ಪೇಟೆ ಮಾರ್ಗವಾಗಿ ಸೊನಲೆಗೆ ತೆರಳುತಿದ್ದಾಗ ತಾವರೆಕೆರೆಯ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಉರುಳಿ ಬಿದ್ದಿದೆ.

ಕಾರಿನಲ್ಲಿ ಸೊನಲೆ ಮೂಲದ ಸುರೇಶ್ ಹಾಗೂ ಅವರ ಪತ್ನಿ ಮತ್ತು ಮಗಳು ಪ್ರಯಾಣಿಸುತಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳೀಯರು ಕೂಡಲೇ ಅಪಘಾತಗೊಂಡವರ ಸಹಾಯಕ್ಕೆ ತೆರಳಿದ ಹಿನ್ನಲೆಯಲ್ಲಿ ಭಾರಿ ಅನಾಹುತ ತಪ್ಪಿದೆ ಎನ್ನಲಾಗುತ್ತಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವೀಡಿಯೋ ಇಲ್ಲಿ ವೀಕ್ಷಿಸಿ👇


Leave a Reply

Your email address will not be published. Required fields are marked *

Exit mobile version