Headlines

Ripponpet | ಶಾಸಕ ಬೇಳೂರು ಆಪ್ತನಿಗೆ ಜೀವಬೆದರಿಕೆ – ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಕೆ

ಶಾಸಕ ಬೇಳೂರು ಆಪ್ತನಿಗೆ ಜೀವಬೆದರಿಕೆ – ಎಸ್ ಪಿ ಗೆ ದೂರು ಸಲ್ಲಿಕೆ

ರಿಪ್ಪನ್‌ಪೇಟೆ : ಪಟ್ಟಣದ ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ರಮೇಶ್ (ಫ್ಯಾನ್ಸಿ ರಮೇಶ್) ತಮಗೆ ಜೀವ ಬೆದರಿಕೆ ಇದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಈ ಬಗ್ಗೆ ಪತ್ರೀಕಾ ಹೇಳಿಕೆ ನೀಡಿರುವ ರಮೇಶ್ ಪಟ್ಟಣದ ಕೆಲವು ಖಾಸಗಿ ಲೇಔಟ್ ನಲ್ಲಿ ಕಾನೂನುಬಾಹಿರವಾಗಿ ಲೇಔಟ್ ನಿರ್ಮಾಣ ಮಾಡುತಿದ್ದಾರೆ ಎಂದು ಸಾಮಾಜಿಕ ಕಳಕಳಿಯಿಂದ ಈಗಾಗಲೇ ಲೇಔಟ್ ಗೆ ಸಂಬಂದಿಸಿದಂತೆ ಹಲವು ದಾಖಲೆಗಳನ್ನು ಪಡೆದುಕೊಂಡು ಬೆಂಗಳೂರಿನ ಲೋಕಾಯುಕ್ತ ಮುಖ್ಯ ಕಛೇರಿಯಲ್ಲಿ ದೂರು ದಾಖಲಿಸಿದ್ದೇನೆ.
ಈ ಹಿನ್ನಲೆಯಲ್ಲಿ ಲೇಔಟ್ ಗೆ ಸಂಬಂದಿಸಿದ ಕೆಲವು ಖಾಸಗಿ ವ್ಯಕ್ತಿಗಳು ನನಗೆ ಪದೇ ಪದೇ ಜೀವ ಬೆದರಿಕೆ ಹಾಕುತ್ತಿರುವ ಕಾರಣ ತನಗೆ ಹಾಗೂ ನನ್ನ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡುವಂತೆ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರಿಗೆ ದೂರು ಸಲ್ಲಿಸಿರುವುದಾಗಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

Exit mobile version